ಮಂಡ್ಯ

ಮಂಡ್ಯ | ಜಿಲ್ಲೆಯಲ್ಲಿ ಶೇ.100 ʻಗ್ಯಾರಂಟಿʼ ಅನುಷ್ಠಾನಗೊಳಿಸಿ

ಮಂಡ್ಯ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಶೇ.100 ರಷ್ಟು ಅನುಷ್ಠಾನಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿಕ್ಕಲಿಂಗಯ್ಯ ಅವರು ಹೇಳಿದರು.

ಇಂದು (ಮಾ.10) ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಡ ಜನರಿಗೆ ಗ್ಯಾರಂಟಿ ಯೋಜನೆಗಳು ಶಕ್ತಿಯನ್ನು ತುಂಬಿದೆ, ಇಂತಹ ಒಂದು ಮಹತ್ವಾಕಾಂಕ್ಷೆಯ ಯೋಜನೆಯ ಬಗ್ಗೆ ಸಾರ್ವಜನಿಕವಾಗಿ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ ಎಂದರು.

ಗೃಹ ಲಕ್ಷ್ಮಿ ಯೋಜನೆಯಡಿ 45 ಲಕ್ಷಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿದ್ದೂ ಅಕ್ಟೋಬರ್ ಮಾಹೆಯ ವರೆಗೆ ಶೇ 99.28 % ರಷ್ಟು ಮಹಿಳೆಯರಿಗೆ ಹಣ ವರ್ಗಾವಣೆ ಮಾಡಲಾಗಿದೆ, ನವೆಂಬರ್ ಮತ್ತು ಡಿಸೆಂಬರ್ ಮಾಹೆಯ ಹಣವನ್ನು ಈಗಾಗಲೇ ಬಿಡುಗಡೆಗೊಳಿಸಿದ್ದು ಶೀಘ್ರವೇ ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಿದರು.

ಐ ಟಿ/ ಜಿ.ಎಸ್.ಟಿ ತೆರಿಗೆದಾರರಲ್ಲವೆಂದು 1246 ಫಲಾನುಭವಿಗಳು ದೃಢೀಕರಣ ನೀಡಿದ್ದಾರೆ, ಇದನ್ನು ಸರ್ಕಾರದ ಗಮನಕ್ಕೆ ತರಲಾಗುವುದು, ಹಳ್ಳಿಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ ಇನ್ನೂ ನೊಂದಣಿಯಾಗದವರ ಮಾಹಿತಿ ಕಲೆಹಾಕಿ ಹಾಗೂ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಸಮಸ್ಯೆಯಿದ್ದಲ್ಲಿ ಶೀಘ್ರವಾಗಿ ಬಗೆಹರಿಸಿ ಗೃಹ ಲಕ್ಷ್ಮೀ ಯೋಜನೆ ತಲುಪಿಸುವಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅನ್ನ ಭಾಗ್ಯ ಯೋಜನೆಯಡಿ 44 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಜಿಲ್ಲೆಯಲ್ಲಿ ಇದ್ದು, ನ್ಯಾಯ ಬೆಲೆ ಅಂಗಡಿಯ ಮಾಲೀಕರು ನಿಗಧಿ ಪಡಿಸಿರುವ ಸಮಯದಲ್ಲಿ ಪಡಿತರ ವಿತರಣೆ ಮಾಡಲಾಗುತ್ತಿದೆಯಾ, ಸರಿಯಾದ ಪ್ರಮಾಣದಲ್ಲಿ ತೂಕ ಮಾಡಿ ಪಡಿತರ ನೀಡಲಾಗುತ್ತಿದೆಯೇ ಎಂದು ತಾಲ್ಲೂಕು ಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು‌. ನ್ಯಾಯ ಬೆಲೆ ಅಂಗಡಿ ಮಾಲೀಕರು ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿದ್ದಲ್ಲಿ ಅಥವಾ ಗ್ರಾಹಕರ ಮೇಲೆ ದರ್ಪ ತೋರುತ್ತಿದ್ದಲ್ಲಿ ಅಂತವರ ವಿರುದ್ಧ ಗ ಸೂಕ್ತ ಕ್ರಮ ಕೈಗೊಳ್ಳಬೇಕು, ಪ್ರತಿ ನ್ಯಾಯ ಬೆಲೆ ಅಂಗಡಿಯ ಮುಂದೆ ಸಹಯವಾಣಿ ಸಂಖ್ಯೆಯನ್ನು ಅನಾವರಣಗೊಳಿಸಬೇಕು ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ಫೆಬ್ರವರಿ ಮಾಹೆಯಿಂದ ನಗದು ಬದಲು ಅಕ್ಕಿ ವಿತರಿಸಲು ಸರ್ಕಾರ ತೀರ್ಮಾನ ಕೈಗೊಂಡಿರುವುದರಿಂದ ಫೆಬ್ರವರಿ ಮಾಹೆಯ ಹೆಚ್ಚುವರಿ ಅಕ್ಕಿಯನ್ನು ಮಾರ್ಚ್ ಮಾಹೆಯಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಯಿಂದ ಫೆಬ್ರವರಿ ಮಾಹೆಯವರೆಗೂ 1 ಕೋಟಿ 80 ಲಕ್ಷಕ್ಕೂ ಅಧಿಕ ಟೀಕೆಟ್ ಗಳನ್ನು ಮಹಿಳಾ ಪ್ರಯಾಣಿಕರಿಗೆ ನೀಡಲಾಗಿದೆ, ಪರೀಕ್ಷಾ ಸಮಯವಾದ್ದರಿಂದ ಚಾಲಕರು ಹಾಗೂ ನಿಯಂತ್ರಕರು ವಿಶೇಷ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆ ಕೋರಿಕೆ ನಿಲುಗಡೆ ನೀಡುವ ವ್ಯವಸ್ಥೆ ಆಗಬೇಕು ಎಂದರು.

ಜಿಲ್ಲೆಯಲ್ಲಿ ಗೃಹಜೋತಿ ಯೋಜನೆಯಡಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳಿದ್ದು ಈ ಯೋಜನೆಯನ್ನು ಶೇ 97.09 ರಷ್ಟು ಯೋಜನೆಯನ್ನು ತಲುಪಿಸಲಾಗಿದೆ ಹಾಗೂ ಯುವನಿಧಿ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾಲೂಕುವಾರು ತಂಡಗಳನ್ನು ರಚಿಸಿ ತಾಲ್ಲೂಕಿನ ಎಲ್ಲಾ ಪದವಿ ವೃತ್ತಿಪರ ಕಾಲೇಜುಗಳಿಗೆ ಭೇಟಿ ನೀಡಿ ಪ್ರಚಾರ ಪಡಿಸಿ, ಈಗಾಗಲೇ ಜನವರಿ ಮಾಹೆಯ ವರೆಗೆ ಒಟ್ಟು 3998 ಅರ್ಹ ಫಲಾನುಭವಿಗಳಿಗೆ ಹಣ ಡಿ.ಬಿ.ಟಿ ಮೂಲಕ ವರ್ಗಾವಣೆಯಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರುಗಳಾದ ಪ್ರಶಾಂತ್ ಬಾಬು ಕೆ ಸಿ, ರಾಜೇಂದ್ರ ಎಸ್.ಹೆಚ್, ಶಿವಣ್ಣ, ಕೆ ಹನುಮಂತಯ್ಯ, ಜಿಲ್ಲಾ ಪಂಚಾಯತ್ ನ ಮುಖ್ಯ ಯೋಜನಾಧಿಕಾರಿ ಧನುಷ್ ಎಸ್,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago