Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮಂಡ್ಯ | ಮಾರ್ಚ್‌ 23ರಂದು ಕೆ.ಎಸ್‌ ನರಸಿಂಹಸ್ವಾಮಿ ಕಾವ್ಯ ಗಾಯನ ಪ್ರಶಸ್ತಿ ಸಮಾರಂಭ

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನ ಸಹಯೋಗದೊಂದಿಗೆ ೨೦೨೩-೨೪ನೇ ಸಾಲಿನ ಕೆ.ಎಸ್.ನರಸಿಂಹಸ್ವಾಮಿ ಸಾಹಿತ್ಯ ಹಾಗೂ ಕಾವ್ಯ ಗಾಯನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾಚ್ ೨೩ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಂದು ಬೆಳಿಗ್ಗೆ ೯.೩೦ಕ್ಕೆ ಖ್ಯಾತ ಗಾಯಕರಿಂದ ಸುಗಮ ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಪ್ರಶಸ್ತಿ ಪ್ರದಾನ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ವಹಿಸುವರು. ಶಾಸಕ ಪಿ.ರವಿಕುಮಾರ್ ಗೌರವ ಉಪಸ್ಥಿತಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಓ ನಂದಿನಿ ಕೆ.ಆರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕೆ.ಎಸ್.ನರಸಿಂಹಸ್ವಾಮಿ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಸಾಹಿತಿಗಳಾದ ಮಂಡ್ಯದ ಪ್ರೊ.ಜಯಪ್ರಕಾಶ್‌ಗೌಡ, ದಕ್ಷಿಣ ಕನ್ನಡ ಜಿಲ್ಲೆಯ ಡಾ.ನಾ.ದಾಮೋದರಶೆಟ್ಟಿ ಅವರನ್ನು, ಕೆ.ಎಸ್.ನರಸಿಂಹಸ್ವಾಮಿ ಕಾವ್ಯ ಗಾಯನ ಪ್ರಶಸ್ತಿಗೆ ಧಾರವಾಡ ಜಿಲ್ಲೆಯ ಖ್ಯಾತ ಗಾಯಕಿ ಸಂಗೀತಾ ಕಟ್ಟಿ, ಕಾಸರಗೋಡಿನ ಸುಗಮ ಸಂಗೀತ ಕಲಾವಿದ ರಮೇಶ್ ಚಂದ್ರ ಅವರನ್ನು ಆಯ್ಕೆ ಮಾಡಿದ್ದು, ೨೫ ಸಾವಿರ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಸದಸ್ಯರಾದ ಡಾ.ಅಪ್ಪಗೆರೆ ತಿಮ್ಮರಾಜು, ಎಂ.ಎನ್.ಸುಬ್ರಹ್ಮಣ್ಯ, ಎ.ಸಿ.ಹಲಗೇಗೌಡ ಇದ್ದರು.

Tags:
error: Content is protected !!