ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆಗಲೇಬೇಕೆಂದು ಹೇಳಿದ್ದೆ. ನನ್ನ ಮಾತಿಗೆ ಎಲ್ಲರೂ ಒಪ್ಪಿಗೆ ಸೂಚಿಸಿದರು. ಇದು ಐದು ಜಿಲ್ಲೆಗಳನ್ನು ಪ್ರತಿನಿಧಿಸುವ ವಿಶ್ವವಿದ್ಯಾನಿಲಯವಾಗಿದ್ದು, ರೈತರು ಏನೆಲ್ಲಾ ಬೆಳೆಯುತ್ತಾರೆ ಎಂಬುದನ್ನು ಇದರಲ್ಲಿ ಸವಿವರವಾಗಿ ತೋರಿಸಲಾಗುತ್ತದೆ. ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಅನುಕೂಲವಾಗಿದೆ. ಇದು ಕೃಷಿ ಪ್ರಧಾನವಾದ ದೇಶವಾಗಿರುವುದರಿಂದ ಕೃಷಿಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ತಿಳಿದುಕೊಳ್ಳಬೇಕು. ಮಂಡ್ಯ ಕೂಡ ಕೃಷಿ ಪ್ರದಾನವಾದ ಜಿಲ್ಲೆ. ಇಲ್ಲಿ ಅನೇಕ ಬೆಳೆಗಳನ್ನು ಬೆಳೆಯುತ್ತಾರೆ ಎಂದು ಹೇಳಿದರು.
ಇದನ್ನು ಓದಿ: ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?
ನಾನು ಕೃಷಿ ಮೇಲೆ ಅವಲಂಬಿತನಾಗಿದ್ದೆ. ನಾನು ರಜೆಯಲ್ಲಿದ್ದಾಗ ಊರಿಗೆ ಹೋಗಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದೆ. ಈಗ ಕೃಷಿ ಲಾಭದಾಯಕಾನ ಅಥವಾ ಇಲ್ಲವಾ ಎಂಬ ಪ್ರಶ್ನೆ ಮೂಡುತ್ತಿದೆ. ಕೃಷಿ ಬಗ್ಗೆ ರೈತರಿಗೆ ಸಂಪೂರ್ಣವಾಗಿ ಅರ್ಥವಾಗಬೇಕು. ಬೆಳೆದ ಪದಾರ್ಥಗಳಲ್ಲಿ ಮೌಲ್ಯವರ್ಧನೆ ಮಾಡಬೇಕು. ಆಗ ಮಾತ್ರ ಹೆಚ್ಚು ಲಾಭದಾಯಕ ಆಗಲಿದೆ. ಹೊಸ ತಳಿಗಳನ್ನ ಉಪಯೋಗಿಸಬೇಕು. ಕೂಲಿ ಕಾರ್ಮಿಕರು ಸಿಗುವುದು ಕಷ್ಟವಾಗುತ್ತಿರುವುದರಿಂದ ಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ ಎಂದರು.





