ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ಡ್ಯಾಂ ಭರ್ತಿಯಾಗಲು ಇನ್ನು ೪ ಅಡಿ ಬಾಕಿಯಿದ್ದು, ಇಂದು ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ.
ಹಾರಂಗಿ ಹಾಗೂ ಹೇಮಾವತಿಯಿಂದ ಹೆಚ್ಚು ನೀರು ಹರಿಸುತ್ತಿರುವುದರಿಂದ ಇಂದು ಸಂಜೆಯೊಳಗೆ ಕನ್ನಂಬಾಡಿ ಕಟ್ಟೆ ಭರ್ತುಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಲ್ಲದೆ ಒಳಹರಿವು ಹೆಚ್ಚಳವಾಗುತ್ತಿರುವುದರಿಂದ ಹೊರ ಹರಿವಿನ ಪ್ರಮಾಣ ಹಂತ ಹಂತವಾಗಿ ಹೆಚ್ಚಿಸಲಾಗುತ್ತಿದೆ. ಇದರಿಂದಾಗಿ ನದಿಪಾತ್ರದ ೯೨ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲ್ಲದೆ ರಂಗನತಿಟ್ಟು ಪಕ್ಷಿಧಾಮದ ದೋಣಿವಿಹಾರಕ್ಕೆ ನಿಷೇಧಿಸಲಾಗಿದೆ. ನದಿಗೆ ಡ್ಯಾಂನಿಂದ ಯಾವುದೇ ಕ್ಷಣದಲ್ಲಾದ್ರೂ ಹೊರಹರಿವಿನ ಪ್ರಮಾಣ ಹೆಚ್ಚಾಗಬಹುದು. ಹೀಗಾಗಿ ಜಿಲ್ಲಾಡಳಿತ ಕೂಡ ನದಿ ಮಾತ್ರದ ಜನರಿಗೆ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಕೆ.ಆರ್ ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದರಿಂದ ಅನ್ನದಾತರಲ್ಲಿ ಸಂತಸ ಮನೆ ಮಾಡಿದೆ.