Mysore
27
scattered clouds

Social Media

ಮಂಗಳವಾರ, 27 ಜನವರಿ 2026
Light
Dark

ಮಂಡ್ಯ | ಡಿ.15ರಂದು ಕೆ.ಎಸ್ ನರಸಿಂಹಸ್ವಾಮಿ ಗೀತಾ ನೃತ್ಯೋತ್ಸವ

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಕೆ.ಎಸ್.ನರಸಿಂಹಸ್ವಾಮಿರವರ ನೆನಪಿನ ಗೀತ ನೃತ್ಯೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ ೧೫ರ ಸಂಜೆ ೦೫.೩೦ಕ್ಕೆ ನಗರದ ಬಾಲಭವನದ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಪೂರ್ವಭಾವಿಯಾಗಿ ಹಾಗೂ ಸಮ್ಮೇಳನಕ್ಕೆ ಸ್ವಾಗತ ಕೋರುವ ಸಲುವಾಗಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯ್ನು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ವಹಿಸುವರು. ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿಯಾಗಿ ಡಾ.ಬಿ.ವಿ.ನಂದೀಶ್ ಪ್ರಾಸ್ತವಿಕ ನುಡಿಗಳನ್ನಾಡುವರು ಎಂದರು.

ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಶ್ರೀನಿವಾಸ ಉಡುವ, ಪೂರ್ಣೀಮ, ಡಾ.ಕಿಕ್ಕೇರಿ ಕೃಷ್ಣಮೂರ್ತಿ, ಡೇವಿಡ್ ಪ್ರತಿಭಾಂಜಲಿ, ವಿದ್ಯಾಶಂಕರ್, ಎಂ.ಎನ್.ಶ್ರೀಧರ್, ಇಂದಿರಾಮಯ್ಯ, ಟಿ.ಎನ್.ಶ್ರೀಧರ್, ಪಿ.ಎಂ>ಶಿವಶಂಕರ್ ಮುಂತಾದ ಕಲಾವಿದರು ಕೆ.ಎಸ್.ನರಸಿಂಹಸ್ವಾಮಿ ಅವರ ಗೀತಗಾಯನ ಹಾಗೂ ನೃತ್ಯ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಹೇಳಿದರು.

ಸದರಿ ಕಾರ್ಯಕ್ರಮವು ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸ್ವಾಗತ ಕೋರುವ ನಿಟ್ಟಿನಲ್ಲಿ ರೂಪಿಸಲಾಗಿದ್ದು, ಸಮ್ಮೇಳನದ ಪ್ರಾರಂಭಕ್ಕೆ ೮೭ ಕಲಾವಿದರು ನಾಡಗೀತೆಯನ್ನು ಹಾಡಲಿದ್ದು, ಅದರ ಪೂರ್ವಭಾವಿ ಸಿದ್ದತಾ ಗಾಯನವನ್ನು ಕಾರ್ಯಕ್ರಮದಲ್ಲಿ ಮಾಡಲಾಗುವುದು. ಸಂಪೂರ್ಣ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.

ಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ನಗರಸಭಾ ಸದಸ್ಯ, ಗಾಯಕ ಶ್ರೀಧರ್, ಡೇವಿಡ್ ಪ್ರತಿಭಾಂಜಲಿ ಇದ್ದರು.

Tags:
error: Content is protected !!