ಮಂಡ್ಯ: ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಅಪಘಾತಕ್ಕೀಡಾಗಿದ್ದು, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಮೈಸೂರು ಬೆಂಗಳೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ಚಾಮರಾಜನಗರ ಘಟಕದ ಬಸ್ ಇದಾಗಿದ್ದು, ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಈ ವೇಳೆ ಮದ್ದೂರಿನ ರುದ್ರಾಕ್ಷಿಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಡಿವೈಡರ್‌ಗೆ ಗುದ್ದಿದೆ. ಪರಿಣಾಮ ಬಸ್ ರಸ್ತೆ ಮಧ್ಯೆ ಪಲ್ಟಿಯಾಗಿದೆ.
ಬಸ್‌ನಲ್ಲಿ 60 ಕ್ಕೂ ಹೆಚ್ಚು ಮಂದಿಯಿದ್ದರು. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮದ್ದೂರಿನ ಮತ್ತು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.