ಮಂಡ್ಯ

ಮಂಡ್ಯ | ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ; 30ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಮದ್ದೂರು ತಾಲ್ಲೂಕಿನ ರುದ್ರಾಕ್ಷಿಪುರ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಅಪಘಾತಕ್ಕೀಡಾಗಿದ್ದು, 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಮೈಸೂರು ಬೆಂಗಳೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ಚಾಮರಾಜನಗರ ಘಟಕದ ಬಸ್‌ ಇದಾಗಿದ್ದು, ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಈ ವೇಳೆ ಮದ್ದೂರಿನ ರುದ್ರಾಕ್ಷಿಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆಯ ಡಿವೈಡರ್‌ಗೆ ಗುದ್ದಿದೆ. ಪರಿಣಾಮ ಬಸ್‌ ರಸ್ತೆ ಮಧ್ಯೆ ಪಲ್ಟಿಯಾಗಿದೆ.

ಬಸ್‌ನಲ್ಲಿ 60 ಕ್ಕೂ ಹೆಚ್ಚು ಮಂದಿಯಿದ್ದರು. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮದ್ದೂರಿನ ಮತ್ತು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago