ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚೆನ್ನಮ್ಮ ಶಿವನಂಜಯ್ಯ ಎಂಬುವವರ ಜಮೀನಿನಲ್ಲಿ ಬೋನು ಅಳವಡಿಸಲಾಗಿತ್ತು. ಕಳೆದ ಒಂದು ವಾರದಿಂದ ಗ್ರಾಮದಲ್ಲಿ ಚಿರತೆ ಉಪಟಳದಿಂದ ಹಲವು ಜಾನುವಾರುಗಳು ಬಲಿಯಾಗಿದ್ದವು. ಸೆರೆ ಸಿಕ್ಕ ಚಿರತೆ ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಮುಗಿಬಿದ್ದಿದ್ದಾರೆ.




