ಮಂಡ್ಯ

ಮಂಡ್ಯ| ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಮಂಡ್ಯ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರೇ ವ್ಯಕ್ತಿಯೊಬ್ಬ ಮಂಗಳವಾರ ಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕೆ.ಆರ್.ಪೇಟೆ ತಾಲ್ಲೂಕಿನ ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಈತ, ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನದಲ್ಲಿ ಬೆಳ್ಳಂಬೆಳಿಗ್ಗೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ಘಟನೆ ನಡೆಯುತ್ತಿದ್ದ ಅಲ್ಲಿ ನೆರೆದಿದ್ದ ಜನರು ನೀರು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ಮೊದಲು ವಿದ್ಯುತ್ ಶಾಕ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿದ ಮಂಜೇಗೌಡ ನಂತರ ತಾನೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದೇನೆ ಎಂದು ಹೇಳಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಆತನನ್ನು ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

3 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

4 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

5 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

5 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

11 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

11 hours ago