ಮಂಡ್ಯ: ಗಾಂಜಾ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಆರೋಪಿಗೆ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.
ಮಹಮ್ಮದ್ ಅಕೀಲ್ ಎಂಬಾತನೇ ಗಾಂಜಾ ಮಾರಾಟ ಮಾಡಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಸಾಮಿಯಾಗಿದ್ದಾನೆ.
ಈತ ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಶನಿಮಹಾತ್ಮ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುತ್ತಿದ್ದ. ಈ ವೇಳೆ ಪೊಲೀಸರು ಪರಶೀಲನೆ ನಡೆಸಿದಾಗ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಲಾಗಿತ್ತು. ಮಂಡ್ಯದ 2ನೇ ಅಪರ ಹಿರಿಯ ಪಿ.ಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗೆ ಆರು ತಿಂಗಳ ಸಾದಾ ಕಾರಾಗೃಹ ಸಜೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.





