ಮಂಡ್ಯ

ಮಂಡ್ಯ | ನಿರ್ಮಿತಿ ಕೇಂದ್ರದಲ್ಲಿ ಭಾರಿ ಭ್ರಷ್ಟಾಚಾರ ; ತನಿಖೆಗೆ ಆಗ್ರಹ

ಮಂಡ್ಯ: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಂದ ವ್ಯಾಪವ ಭ್ರಷ್ಟಾಚಾರ ನಡೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಮಧು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾಗುವ ಕಟ್ಟಡಗಳ ನಿರ್ಮಾಣದಲ್ಲಿ ಬಾರಿ ಅವ್ಯವಹಾರ ನಡೆಸಿರುವ ಕೇಂದ್ರದ ನಿವೃತ್ತ ಯೋಜನಾ ವ್ಯವಸ್ಥಾಪಕ ನರೇಶ್ ನಾಲ್ಕಾರು ಕೋಟಿ ರೂ ಲಪಟಾಯಿಸಿದ್ದಾರೆ ಎಂದು ದೂರಿದರು.

ಮದ್ದೂರು ತಾಲೂಕಿನ ಹರಕನಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡದ ಕಾಮಗಾರಿ ಆರಂಭಿಸದೇ ಕಟ್ಟಡ ಕಾಮಗಾರಿಗೆ ಮೀಸಲಿಟ್ಟಿದ್ದ ೨೫ ಲಕ್ಷ ರೂಗಳಲ್ಲಿ ಮುಂಗಡ ಹಣ ೧೮.೭೫ ಬಿಡುಗಡೆಯಾಗಿದ್ದು, ಕೇಂದ್ರದ ಸಿಬ್ಬಂದಿಯೇ ಆದ ಸುನಿಲ್ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಠಿಸಿ, ೧,೦೨,೬೧೦ ರೂ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಮಂಡ್ಯ, ಮಳವಳ್ಳಿ, ನಾಗಮಂಗಲ, ಕೆ.ಆರ್.ಪೇಟೆ, ಮದ್ದೂರು, ಪಾಂಡವಪುರ ತಾಲೂಕಿನಲ್ಲಿ ಐಟಿಐ ಕಾಲೇಜುಗಳ ವರ್ಕ್‌ಶಾಪ್ ಮತ್ತು ಟೆಕ್ನಾಲಜಿ ಲ್ಯಾಬ್ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಅಂದಾಜು ಮೊತ್ತ ೮೩.೨೯ ಲಕ್ಷ ರೂ ಮತ್ತು ೨೦.೨೯ ಲಕ್ಷ ರೂ ಕ್ರಮವಾಗಿ ಸಿದ್ದಗೊಳಿಸಿ, ಅಲ್ಲಿಯೂ ಲಕ್ಷಾಂತರ ರೂ.ಗಳ ಅವ್ಯವಹಾರ ನಡೆಸಿದ್ದಾರೆ ಎಂದು ದಾಖಲೆಗಳನ್ನು ಮುಂದಿಟ್ಟರು.

ಇಷ್ಟಲ್ಲದೇ ಜಿಲ್ಲೆಯಲ್ಲಿ ಹೀಗೆಯೇ ಹಲವು ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಅವ್ಯವಹಾರ ನಡೆಸಿರುವ ನರೇಶ್ ಸುಮಾರು ನಾಲ್ಕು ಕೋಟಿಗೂ ಹೆಚ್ಚು ಹಣ ನುಂಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೂರ್ಗಳ್ಳಿ ಕೆರೆ ಒತ್ತುವರಿ ಕೂಗು; ಗ್ರಾಮಸ್ಥರಲ್ಲಿ ಹಲವು ಅನುಮಾನ

ಸಾಲೋಮನ್ ೨೨.೨೦ ವಿಸ್ತೀರ್ಣದ ಕೆರೆ ಈಗ ಉಳಿದಿರುವುದು ೫ ಎಕರೆ! ಅನೇಕ ವರ್ಷಗಳಿಂದ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಯಾರೇ…

6 hours ago

ಸ್ಥಳೀಯ ಸಂಸ್ಥೆ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ: ಭೋಸರಾಜು

ನವೀನ್ ಡಿಸೋಜ ಖಾಲಿ ಹುದ್ದೆಗಳ ಭರ್ತಿ ಸಂಬಂಧ ಚರ್ಚೆ ಸ್ಥಳೀಯ ಸಂಸ್ಥೆಗಳ ಸಮಸ್ಯೆ ಹಿಂದಿನಿಂದಲೂ ಇದೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ…

6 hours ago

‘ಖಾಲಿ ಹುದ್ದೆ ಭರ್ತಿಗೆ ಕ್ರಮವಹಿಸುವುದು ಅಗತ್ಯ : ಸಚಿವ ಚಲುವರಾಯಸ್ವಾಮಿ

ಬಿ.ಟಿ. ಮೋಹನ್ ಕುಮಾರ್ ಶೇ.೬೦ರಷ್ಟು ಬಿ, ಸಿ, ಡಿ ಹುದ್ದೆಗಳು ಬಹಳ ವರ್ಷಗಳಿಂದ ಖಾಲಿ ಪೌರಕಾರ್ಮಿಕರ ಹುದ್ದೆ ಭರ್ತಿಗೆ ಸಂಬಂಧಪಟ್ಟ…

6 hours ago

ಬೀದಿ ಮಕ್ಕಳ ಆಶಾಕಿರಣ “ಚೇತನಾ”

ಪಂಜು ಗಂಗೊಳ್ಳಿ  ಹತ್ತನೇ ತರಗತಿ ಪರೀಕ್ಷೆಗಳು ಮುಗಿದು ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇವರಲ್ಲಿ ಹೆಚ್ಚಿನ ಮಕ್ಕಳಿಗೆ ಈ ಹತ್ತನೇ…

6 hours ago

ಓದುಗರ ಪತ್ರ: ಗಿಡಗಂಟೆ ತೆರವುಗೊಳಿಸಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕ್ಯಾತಮಾರನಹಳ್ಳಿ 4ನೇ ಹಂತದ ಕಲ್ಯಾಣಗಿರಿ ನಗರ ಬಡಾವಣೆಯನ್ನು ನಿರ್ಮಿಸಲಾಗಿದೆ. ಇಲ್ಲಿನ ವಾಸದ ಮನೆಗಳ ಪಕ್ಕ ಇರುವ…

6 hours ago

ಅವಶ್ಯಕತೆಗೆ ಅನುಗುಣವಾಗಿ ನೇಮಕಾತಿ: ಸಚಿವ ವೆಂಕಟೇಶ್‌

ಆಂದೋಲನ’ ಸಂದರ್ಶನದಲ್ಲಿ ಸಚಿವ ಕೆ.ವೆಂಕಟೇಶ್ ಭರವಸೆ ನೇರ ನೇಮಕಾತಿ ಅಥವಾ ನಿಯೋಜನೆ ಮೂಲಕ ಭರ್ತಿಗೆ ಸೂಚನೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ…

6 hours ago