Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಮಂಡ್ಯ: ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

ಮಂಡ್ಯ: ಇಲ್ಲಿನ ಮಿಮ್ಸ್‌ ಹಾಸ್ಟೆಲ್‌ನಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್‌ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.

ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್‌ ವ್ಯಾಸಂಗ ಮಾಡುತ್ತಿದ್ದ ಭರತ್‌, ಕಳೆದ ತಡರಾತ್ರಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಮ್ಸ್ ನಿರ್ದೇಶಕ ಡಾ. ನರಸಿಂಹಸ್ವಾಮಿ ಪ್ರತಿಕ್ರಿಯೆ ನೀಡಿದ್ದು,  ರಾತ್ರಿ 12 ಗಂಟೆಯವರೆಗೆ ಭರತ್ ಪಕ್ಕದ ರೂಂನಲ್ಲಿ ಸ್ನೇಹಿತರೊಂದಿಗೆ ಮಾತಾಡಿದ್ದಾನೆ. ಬಳಿಕ ತನ್ನ ರೂಂಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಜೊತೆ ರೂಂ‌ನಲ್ಲಿ ಇಬ್ಬರು ಇದ್ದರು. ನಿನ್ನೆ ಅವರಿಬ್ಬರು ಊರಿಗೆ ಹೋಗಿದ್ದರು. ಬೆಳಿಗ್ಗೆ ಒಬ್ಬ ವಿದ್ಯಾರ್ಥಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಭರತ್ ಫುಟ್ಬಾಲ್ ಆಟದಲ್ಲಿ ಮುಂದೆ ಇದ್ದ. ಕಳೆದ ವರ್ಷ ಭರತ್ ಹೆಚ್ಚು ಕಾಲೇಜಿಗೆ ಅಟೆಂಡ್ ಆಗಿಲ್ಲ. ಹೀಗಾಗಿ ಮೊದಲ ವರ್ಷದ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿರಲಿಲ್ಲ. ಈ ವರ್ಷ ಪರೀಕ್ಷೆಗಳನ್ನು ಕ್ಲಿಯರ್ ಮಾಡಿಕೊಳ್ಳಬೇಕು ಅಂದುಕೊಂಡಿದ್ದ. ಹೀಗಾಗಿ ಪರೀಕ್ಷಾ ಶುಲ್ಕ ಕಟ್ಟಲು ಭರತ್ ಹಾಸ್ಟೆಲ್‌ಗೆ ಬಂದಿದ್ದ.
ರಾತ್ರಿ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ‌ತಿಳಿದುಬಂದಿಲ್ಲ. ಸದ್ಯ ಪೋಷಕರಿಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.

 

Tags:
error: Content is protected !!