suicide
ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ ನಡೆದಿದ್ದು, ಯುವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
24 ವರ್ಷದ ಸಿಂಚನಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.
ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಪ್ರಸಾದಹಳ್ಳಿ ಗ್ರಾಮದ ಮಂಜುನಾಥ್ ಎಂಬುವವರ ಪುತ್ರಿಯಾಗಿರುವ ಸಿಂಚನಾ ಕೆಲ ವರ್ಷಗಳಿಂದ ಪಿಸಿಓಡಿ ಸಮಸ್ಯೆಯಿಂದ ಬಳಲುತ್ತಿದ್ದರು.
ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದ ಅವರು, ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯುವತಿ ಕುಟುಂಬಕ್ಕೆ ಸುದ್ದಿ ಮುಟ್ಟಿಸಲಾಗಿದ್ದು, ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…