ಮಂಡ್ಯ

ಮಂಡ್ಯ: ಕಾವೇರಿ ನದಿಗೆ ಹಾರಿ ಎಂಸಿಎ ಪದವೀಧರೆ ಆತ್ಮಹತ್ಯೆ

ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ ನಡೆದಿದ್ದು, ಯುವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

24 ವರ್ಷದ ಸಿಂಚನಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಪ್ರಸಾದಹಳ್ಳಿ ಗ್ರಾಮದ ಮಂಜುನಾಥ್‌ ಎಂಬುವವರ ಪುತ್ರಿಯಾಗಿರುವ ಸಿಂಚನಾ ಕೆಲ ವರ್ಷಗಳಿಂದ ಪಿಸಿಓಡಿ ಸಮಸ್ಯೆಯಿಂದ ಬಳಲುತ್ತಿದ್ದರು.

ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದ ಅವರು, ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯುವತಿ ಕುಟುಂಬಕ್ಕೆ ಸುದ್ದಿ ಮುಟ್ಟಿಸಲಾಗಿದ್ದು, ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

14 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

15 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

17 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

17 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

21 hours ago