Mandya Medical College to Be Upgraded: Minister N. Cheluvarayaswamy
ಬೆಂಗಳೂರು : ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸುವ ಜೊತೆಗೆ ನವೀಕರಣ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೇಲ್ ತಿಳಿಸಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿಯವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತ್ರತ್ವದಲ್ಲಿ ನಡೆದ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಅಭಿವೃದ್ದಿ ಕುರಿತು ವಿಸ್ತೃತ ಚರ್ಚೆ ನಡೆಸಿದ ನಂತರ ಉಭಯ ಸಚಿವರು, ಎಲ್ಲಾ ರೀತಿಯ ಅಗತ್ಯ ನೆರವು ನೀಡುವ ಭರವಸೆ ನೀಡಿದರು..
ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800 ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಎಂದು ಸಭೆಯಲ್ಲಿ ಸಚಿವರಾದ ಚಲುವರಾಯಸ್ವಾಮಿಯವರು ಗಮನ ಸೇಳೆದರು..
ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವರು, ಪರಿಸರ ಇಲಾಖೆ ಪರವಾನಗಿ ನವೀಕರಿಸಿ 500 ಹಾಸಿಗೆಗಳ ಮೇಲ್ದರ್ಜೆಗೆರಿಸಲು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಿದರು.
ಇದೇ ರೀತಿ ತುರ್ತು ಚಿಕಿತ್ಸಾ ಘಟಕ ಹಾಗೂ ಲಘು ಶಸ್ತ್ರ ಚಿಕಿತ್ಸಾ ಘಟಕಗಳ ಕೊಠಡಿ ನಿರ್ಮಾಣ/ನವೀಕರಣ, ಕ್ಯಾನ್ಸರ್ ಚಿಕಿತ್ಸಾ ಘಟಕ, ಲಾಂಡ್ರಿ ಸೌಲಭ್ಯ, ಹೆಚ್ಚುವರಿ ಕೊಠಡಿಗಳ ನಿರ್ಮಾಣ, ವಿದ್ಯುತ್ ಪೂರೈಕೆ ಸೇರಿದಂತೆ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ಪಟ್ಟಿ ಮಾಡಿ ವಿಸ್ತೃತ ಯೋಜನೆಯ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರಾದ ಚಲುವರಾಯಸ್ವಾಮಿಯವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್ ರವರು ಆಸ್ಪತ್ರೆಯ ಅಧಿಕಾರಿಗಳಿಗೆ ತಿಳಿಸಿದರು..
ಇನ್ನೂ ಇದೇ ವೇಳೆ ಮಂಡ್ಯ ಜಿಲ್ಲೆಯ ಏಳು ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತಿಕರಣಗೊಳಿಸುವ ಬಗ್ಗೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿರ್ದೆಶನ ನೀಡಿದರು.
ಇನ್ನೂ ಸಭೆಯಲ್ಲಿ ಭಾಗವಹಿಸಿದ್ದ ಶ್ರೀರಂಗಪಟ್ಟಣ ಶಾಸಕರು, ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಹಾಗೂ ಮಂಡ್ಯ ಶಾಸಕ ರವಿಕುಮಾರ್ ಗಣಿಗ, ಪಾಂಡವಪುರ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಮದ್ದೂರು ಶಾಸಕ ಉದಯ್ ಗೌಡ, ವಿಧಾನಪರಿಷತ್ ಸದಸ್ಯ ಮಧು ಮಾದೇಗೌಡ, ಮಂಡ್ಯ ವೈದ್ಯಕೀಯ ಕಾಲೇಜಿನ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆ ನೀಡಿದರು..
ಈ ಬಗ್ಗೆ ಮೇಲ್ವಿಚಾರಣೆ ವಹಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ರವರಿಗೆ ಸಚಿವರು ಸೂಚಿಸಿದರು..
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹಮದ್ ಮೊಹಿಸಿನ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಮಂಡ್ಯ ವೈದ್ಯಕೀಯ ಕಾಲೇಜು ನಿರ್ದೇಶಕ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು..
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…