Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಮಂಡ್ಯ ಮಿಮ್ಸ್; ರೇಡಿಯಾಲಜಿಸ್ಟ್‌ ಹುದ್ದೆ ಭರ್ತಿಗೆ ಕ್ರಮ: ಸಚಿವ ಶರಣ ಪ್ರಕಾಶ್‌ ಪಾಟೀಲ್‌

ಮಂಡ್ಯ: ಎಂ.ಆರ್.ಐ ಹಾಗೂ ಸಿ.ಟಿ ಸ್ಕ್ಯಾನ್ ಆದ ನಂತರ ರೋಗಿಗಳ ವರದಿ ನೀಡಲು ಮೂರರಿಂದ ಐದು ದಿನ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಖಾಲಿ ಇರುವ ರೆಡಿಯಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿ ಟೆಲಿ ಸರ್ವಿಸ್ ಉಪಯೋಗಿಸಿಕೊಂಡು ಒಂದು ದಿನದೊಳಗಾಗಿ ವರದಿ ನೀಡುವ ವ್ಯವಸ್ಥೆ ಮಾಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.‌

ನಗರದ ಮಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯಧಿಕಾರಿಗಳ ಸಭೆ ನಡೆಸಿದ ಅವರು, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳ ಖಾತೆಗೆ ಸರಿಯಾಗಿ ಸಂಬಳ, ಪಿ‌ಎಫ್ ಜಮೆಯಾಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ. ಇದರ ಬಗ್ಗೆ ದೂರುಗಳು ಕೇಳಿಬಂದಲ್ಲಿ ಶಿಸ್ತು ಕ್ರಮ ವಹಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ವೈದ್ಯರು ತಮ್ಮ ಕಾಲೇಜಿನ ಕೆಲಸ ನಿರ್ವಹಿಸಬೇಕಿರುವ ಸಮಯದಲ್ಲಿ ಹೊರಗೆ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳಲ್ಲಿ ಕಾರ್ಯನಿರ್ವಹಿಸುವುದು ಕಂಡುಬಂದಿದ್ದಲ್ಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವು. ಆಸ್ಪತ್ರೆಯಲ್ಲಿ ಹಾಜರಾತಿಗೆ ಬಯೋಮೆಟ್ರಿಕ್‌ ಅಳವಡಿಸಿದ್ದು, ಇನ್ನು ಮುಂದೆ ಮಧ್ಯಾಹ್ನದ ವೇಳೆ ಸಹ ಈ ಹಾಜರಾತಿ ಸಂಗ್ರಹಿಸಲು ಆಸ್ಪತ್ರೆಯ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದರು.

Tags: