ಮಂಡ್ಯ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರ ಕಷ್ಟ- ಸುಖಗಳಿಗೆ ಸ್ಪಂದಿಸುವ ಮೂಲಕ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾದರಿಯಾಗಿ, ಸದೃಢವಾಗಿ ನಡೆಯುತ್ತಿದೆ. ಸಂಘ ತನ್ನ ಸದಸ್ಯರ ಕಷ್ಟ- ಸುಖಗಳಲ್ಲಿ ಭಾಗಿಯಾಗಿ ಅವರೊಂದಿಗೆ ಇರುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ೩೦ ವರ್ಷಗಳಿಂದ ಸಂಘ ಪತ್ರಕರ್ತರ ನೆರವಿಗೆ ನಿಂತಿದ್ದು, ಯಶಸ್ವಿ ಕೆಲಸ ಮಾಡಿದೆ. ಸಂಘದ ಪದಾಧಿಕಾರಿಗಳು ಉತ್ತಮ ರೀತಿಯ ಸದೃಢವಾಗಿ ಯೋಜನೆಗಳ ಅನುಷ್ಠಾನಕ್ಕೆ ತರಲು ಆರ್ಥಿಕ ಶಕ್ತಿಯನ್ನು ಹೊಂದಿಸಿರುವಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಕ್ಷೇಮಾಭಿವೃದ್ಧಿ ನಿಧಿಗೆ ಸಿಎಸ್‌ಆರ್ ಯೋಜನೆಯಡಿ ೧೦ ಲಕ್ಷ ರೂ.ಗಳ ಅನುದಾನ ಹಾಗೂ ಸಂಸದರ ನಿಧಿಯಿಂದ ಸಂಘದ ಕಟ್ಟಡ ನಿರ್ಮಾಣಕ್ಕೆ ೨೦ ಲಕ್ಷ ಅನುದಾನ ನೀಡುವಂತೆ ಕೋರಿದ್ದಾರೆ. ನಾನು ಈ ಎರಡು ಬೇಡಿಕೆಗಳ ಬಗ್ಗೆ ಶೀಘ್ರವಾಗಿ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಶಾಸಕ ಎಚ್. ಟಿ.ಮಂಜು, ಮಾಜಿ ಶಾಸಕ ಅನ್ನದಾನಿ ಅವರೊಂದಿಗೆ ಚರ್ಚೆ ನಡೆಸಿ ನಿಮ್ಮ ಎರಡು ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವುದಾಗಿ ಭರವಸೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಮ್ ಮಾತನಾಡಿ, ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ಅಂಬರೀಶ್ ಅವರು ಸಂಸದರಾಗಿದ್ದ ಸಂದರ್ಭದಲ್ಲಿ ೮.೫೦ ಲಕ್ಷ ರೂ. ನೀಡಿದ್ದರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಸೇರಿದಂತೆ ಹಲವರು ನಮ್ಮ ಸಂಘದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ನೀಡಿದ ಅನುದಾನದಿಂದ ನಮ್ಮ ಸಂಘಕ್ಕೆ ಸುಸಜ್ಜಿತವಾದ ಕಟ್ಟಡ, ಜಿಮ್ ಹಾಗೂ ಲೈಬ್ರರಿ ಹೊಂದಲು ಸಾಧ್ಯವಾಗಿದೆ. ನಮ್ಮ ಸಂಘ ಇದುವರೆಗೆ ಸುಮಾರು ೩೭ ಲಕ್ಷ ರೂ.ಗೂ ಹೆಚ್ಚು ಪರಿಹಾರ ವಿತರಣೆ ಮಾಡಿದೆ. ಸಂಘದ ಸದಸ್ಯರು ಅಪಘಾತದಲ್ಲಿ ಗಾಯಗೊಂಡಾಗ, ಮರಣ ಹೊಂದಿದಾಗ ಗರಿಷ್ಠ ೫೦ ಸಾವಿರ ರೂ.ಗಳವರೆಗೂ ಸಹಾಯ ಧನ ನೀಡಿದೆ. ಸಂಘದಲ್ಲಿ ಸಕ್ರಿಯವಾಗಿರುವ ಕ್ಷೇಮಾಭಿವೃದ್ಧಿ ನಿಧಿ ಇದ್ದು ಇದಕ್ಕೆ ೧೦ ಲಕ್ಷ ರೂ.ಗಳ ನಿಶ್ಚಿತ ಠೇವಣಿ ಹಾಗೂ ಸಂಸದರ ನಿಧಿಯಿಂದ ಕಟ್ಟಡ ನಿರ್ಮಾಣಕ್ಕೆ ೨೦ ಲಕ್ಷ ರೂ. ಅನುದಾನ ನೀಡುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಹೆಚ್.ಟಿ.ಮಂಜು, ಮಾಜಿ ಶಾಸಕ ಕೆ.ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮನ್‌ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರು, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ (ನಾಗೇಶ್), ಅವರನ್ನು ಅಭಿನಂದಿಸಲಾಯಿತು.
ಈ ವೇಳೆ ಜಿಲ್ಲಾಧ್ಯಕ್ಷ ಬಿ.ಪಿ.ಪ್ರಕಾಶ್, ಉಪಾಧ್ಯಕ್ಷ ಕೆ.ಎನ್.ನವೀನ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್, ಖಜಾಂಚಿ ನಂಜುಂಡಸ್ವಾಮಿ, ರಾಷ್ಟ್ರ ಸಮಿತಿ ಸದಸ್ಯ ಬಾಲಕೃಷ್ಣ ಇದ್ದರು.
ಸಾಲೋಮನ್ ೨೨.೨೦ ವಿಸ್ತೀರ್ಣದ ಕೆರೆ ಈಗ ಉಳಿದಿರುವುದು ೫ ಎಕರೆ! ಅನೇಕ ವರ್ಷಗಳಿಂದ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಯಾರೇ…
ನವೀನ್ ಡಿಸೋಜ ಖಾಲಿ ಹುದ್ದೆಗಳ ಭರ್ತಿ ಸಂಬಂಧ ಚರ್ಚೆ ಸ್ಥಳೀಯ ಸಂಸ್ಥೆಗಳ ಸಮಸ್ಯೆ ಹಿಂದಿನಿಂದಲೂ ಇದೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ…
ಬಿ.ಟಿ. ಮೋಹನ್ ಕುಮಾರ್ ಶೇ.೬೦ರಷ್ಟು ಬಿ, ಸಿ, ಡಿ ಹುದ್ದೆಗಳು ಬಹಳ ವರ್ಷಗಳಿಂದ ಖಾಲಿ ಪೌರಕಾರ್ಮಿಕರ ಹುದ್ದೆ ಭರ್ತಿಗೆ ಸಂಬಂಧಪಟ್ಟ…
ಪಂಜು ಗಂಗೊಳ್ಳಿ ಹತ್ತನೇ ತರಗತಿ ಪರೀಕ್ಷೆಗಳು ಮುಗಿದು ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇವರಲ್ಲಿ ಹೆಚ್ಚಿನ ಮಕ್ಕಳಿಗೆ ಈ ಹತ್ತನೇ…
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕ್ಯಾತಮಾರನಹಳ್ಳಿ 4ನೇ ಹಂತದ ಕಲ್ಯಾಣಗಿರಿ ನಗರ ಬಡಾವಣೆಯನ್ನು ನಿರ್ಮಿಸಲಾಗಿದೆ. ಇಲ್ಲಿನ ವಾಸದ ಮನೆಗಳ ಪಕ್ಕ ಇರುವ…
ಆಂದೋಲನ’ ಸಂದರ್ಶನದಲ್ಲಿ ಸಚಿವ ಕೆ.ವೆಂಕಟೇಶ್ ಭರವಸೆ ನೇರ ನೇಮಕಾತಿ ಅಥವಾ ನಿಯೋಜನೆ ಮೂಲಕ ಭರ್ತಿಗೆ ಸೂಚನೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ…