ಮಂಡ್ಯ

ಮಂಡ್ಯ | ಮಗಳ ಸಾವಿನಿಂದ ಮನನೊಂದ ತಾಯಿ ಆತ್ಮಹತ್ಯೆ

ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಗ್ರಾಮದ ಲಕ್ಷ್ಮೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ೨೦೨೪ರ ಫೆ.೨೧ರಂದು ಇವರ ಪುತ್ರಿ ವಿಜಯಲಕ್ಷ್ಮಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಅವರ ಪ್ರಿಯಕರ ಕೈ ಕೊಟ್ಟ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಾಯಿ ಲಕ್ಷ್ಮಿ ಅವರು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಯುವಕನ ಮೇಲೆ ದೂರು ನೀಡಿದ್ದರೂ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿ ಡೆತ್‌ನೋಟ್‌ನಲ್ಲಿ ಯುವಕರ ಕುಟುಂಬದವರು ಮತ್ತು ಗ್ರಾಮದ ಕೆಲವು ಮುಖಂಡರ ಹೆಸರುಗಳನ್ನು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್‌ನೋಟ್‌ನಲ್ಲಿ ಏನಿದೆ
ನನ್ನ ಮಗಳು ಮೃತಪಟ್ಟು ೨೦ ದಿನ ಕಳೆದರೂ ಕಾನೂನು ಕ್ರಮ ತೆಗೆದುಕೊಳ್ಳದೆ ಇರುವುದರಿಂದ ಹಾಗೂ ಹರಿಕೃಷ್ಣ ಮನೆಯವರು ನಮ್ಮ ಮನೆಯವರ ಮೇಲೆ ದರ್ಪ ದೌರ್ಜನ್ಯ ತೋರಿಸಿ ಹಣದ ಆಮಿಷಕ್ಕೆ ಕಾನೂನು ಜಾರಿಯಾಗಿದ್ದು ಇವರ ನನ್ನ ಸಾವಿಗೆ ಕಾರಣರಾಗಿದ್ದಾರೆ.

ಕೆಂಪೇಗೌಡ, ಸರೋಜಮ್ಮ, ನಾಗಣ್ಣ, ಚಿಕ್ಕತಿಮ್ಮೇಗೌಡ, ಪುಟ್ಟೇಗೌಡ, ಶಿವು, ಮಂಜು, ಪ್ರಕಾಶ ಇವರು ನಮ್ಮ ಊರಿನ ಜನಗಳು ನ್ಯಾಯ ಕೇಳುವುದಕ್ಕೆ ಹೋಗುವುದರಿಂದ ಜನರ ಮೇಲೆ ಕಂಪ್ಲೇಟ್ ಮಾಡಿ ಅವರದೇ ತಪ್ಪಿದ್ದರೂ ನಮ್ಮ ಊರಿನ ಜನರ ಮೇಲೆ ತಪ್ಪು ಹೊರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಸಾವಿಗೆ ಇವರೇ ಕಾರಣ ನನ್ನ ಮಗಳಿಗೆ ನ್ಯಾಯ ಕೊಡಿಸಿ ಎಂದು ಡೆತ್‌ನೋಟ್ ನಲ್ಲಿ ಬರೆದಿದ್ದಾರೆ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ವೃತ್ತ ನಿರೀಕ್ಷಕರ ಶಿವಪ್ರಸಾದ್ ರಾವ್ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

6 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

2 hours ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

2 hours ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

2 hours ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

2 hours ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

3 hours ago