Mysore
29
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಮಂಡ್ಯ ಮೈಶುಗರ್‌ ಕಾರ್ಖಾನೆಯ 25 ವರ್ಷದ ವಿದ್ಯುತ್‌ ಬಿಲ್‌ ಮನ್ನಾ

ಮಂಡ್ಯ: ಮಂಡ್ಯ ಜಿಲ್ಲೆಯ ಮೈ ಶುಗರ್‌ ಫ್ಯಾಕ್ಟರಿಯು ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟದೇ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಬಾಕಿಯಿರುವ ವಿದ್ಯುತ್‌ ಬಿಲ್‌ 52.25 ಕೋಟೀ ರೂ ಮನ್ನಾ ಮಾಡುವಂತೆ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಹೀಗಾಗಿ ಕಡತ ಮಂಡನೆಗೆ ಸಿಎಂ ಸೂಚಿಸಿದ್ದಾರೆ.

ಮೈಶುಗರ್‌ ಕಾರ್ಖಾನೆ ವಿದ್ಯುತ್‌ ಬಿಲ್‌ ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ, ಕಡತ ಮಂಡನೆಗೆ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಂಡ್ಯ ಮೈ ಶುಗರ್‌ ಕಾರ್ಖಾನೆ ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟಿರಲಿಲ್ಲ. ಹೀಗಾಗಿ 52.25 ಕೋಟಿ ರೂ ಬಾಕಿ ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪನಿಯು ಕಾರ್ಖಾನೆಗೆ ನೋಟಿಸ್‌ ನೀಡಿತ್ತು.

ರೈತರ ಹಿತದೃಷ್ಟಿಯಿಂದ ಕಾರ್ಖಾನೆ ಉಳಿಸಿಕೊಳ್ಳುವುದು ಅವಶ್ಯವಾಗಿದ್ದು, ವಿದ್ಯುತ್‌ ಬಿಲ್‌ ಮನ್ನಾ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮನವಿ ಮಾಡಿದ್ದಾರೆ.

ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್‌ ಫ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ ಇಡೀ ಏಷ್ಯಾ ಖಂಡದಲ್ಲೇ ಮೊದಲು ಎಂದರೆ, ೧೯೩೨ರಲ್ಲಿ ಈ ಕಾರ್ಖಾನೆಯು ಪ್ರಾರಂಭವಾಯಿತು. ಇದು ಮಂಡ್ಯ ಜಿಲ್ಲೆಯ ಹಾಗೂ ಕರ್ನಾಟಕದ ಹೆಮ್ಮೆಯಾಗಿದೆ. ಆದರೆ ಇದೀಗ ಕಳೆದ ೨೫ ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟದೇ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ.

ಇದರಿಂದ ಪಾರು ಮಾಡುವ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದ್ದು, ಸಂಪುಟ ಸಭೆ ಕರೆದು ಬಾಕಿ ಇರುವ ವಿದ್ಯುತ್‌ ಬಿಲ್‌ ೫೨.೨೫ ಕೋಟಿ ರೂ ಮನ್ನಾ ಮಾಡಬೇಕಿದೆ. ಹಲವು ವರ್ಷಗಳಿಂದ ಹಲವಾರು ಕಾರಣಗಳಿಂದಾಗಿ ಬಂದ್‌ ಆಗಿದ್ದ ಸಕ್ಕರೆ ಕಾರ್ಖಾನೆಯು ಕಳೆದ ವರ್ಷ ಕಾಂಗ್ರೆಸ್‌ ಸರ್ಕಾರದ ಮುತುವರ್ಜಿಯಿಂದ ಪುನರಾರಂಭಗೊಂಡಿತು.

 

Tags:
error: Content is protected !!