ಮಂಡ್ಯ

ಮಂಡ್ಯ | ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆಯಿಲ್ಲ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಇಲ್ಲ. ರೈತರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು.

ಶುಕ್ರವಾರ ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 5000 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನಿದ್ದು, ಇನ್ನು‌ ಕೆಲವೇ ದಿನದಲ್ಲಿ 1800 ಮೆ.ಟನ್ ಯೂರಿಯಾ ಬರಲಿದೆ. ಜಿಲ್ಲೆಯಲ್ಲಿ ಕೃಷಿ ಸಂಬಂಧಿಸಿದ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ರಸಗೊಬ್ಬರ ಮಾರಾಟಗಾರರು ತಮ್ಮಲ್ಲಿರುವ ಭೌತಿಕ‌ ಹಾಗೂ ಆನ್ ಲೈನ್ ದಾಸ್ತಾನು ಒಂದೆ ರೀತಿ ಇರುವಂತೆ ನೋಡಿಕೊಳ್ಳಬೇಕು. ಮಾರಾಟವಾದ ತಕ್ಷಣ ನಮೂದಿಸಿದರೆ ಸರಿಯಾದ ಲೆಕ್ಕ ಸಿಗುತ್ತದೆ ಎಂದರು. ರಸಗೊಬ್ಬರದ ಕೃತಕ ಕೊರತೆ ಉಂಟಾಗುವ ರೀತಿ ಸನ್ನಿವೇಶ ಸೃಷ್ಠಿಸುವುದು, ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟಗಾರರು ತಮ್ಮ ಬಳಿ ಇರುವ ರಸಗೊಬ್ಬರ ಹಾಗೂ ದಾಸ್ತಾನು ವಿವರದ ಫಲಕವನ್ನು ಅನಾವರಣಗೊಳಿಸಬೇಕು. ರೈತರಿಗೆ ನ್ಯನೋ ಯೂರಿಯಾದ ಉಪಯುಕ್ತತೆ ಹಾಗೂ ಬಳಕೆಯ ಬಗ್ಗೆ ಕೃಷಿ ಅಧಿಕಾರಿಗಳು ಜಗೃತಿ ಮೂಡಿಸಬೇಕು ಎಂದರು. ತಹಶೀಲ್ದಾರ್ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ನಿಯಮಿತವಾಗಿ ರಸಗೊಬ್ಬರ ಮಾರಾಟ ಅಂಗಡಿಗಳಿಗೆ ಹಾಗೂ ರೈತ ಚಟುವಟಿಕೆ ಇರುವ ಸ್ಥಳಗಳಿಗೆ ಭೇಟಿ ನೀಡಿ ಕೆಲಸಗಳು ನಿಯಮಾನುಸಾರ ನಡೆಯುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ ಎಂದರು.

ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡುವುದನ್ನು ತಡೆಗಟ್ಟಲು ಉಪವಿಭಾಗಾಧಿಕಾರಿಗಳ ಮುಂದಾಳತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ತಂಡದಲ್ಲಿ ಕೈಗಾರಿಕಾ ಇಲಾಖೆ,ವಾಣಿಜ್ಯ ತೆರಿಗೆ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಸಹ ಕಾರ್ಯನಿರ್ವಹಿಸಲಿದ್ದಾರೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಅಕ್ರಮವಾಗಿ ಯುರಿಯಾ ದಾಸ್ತಾನು ಪ್ರಕರಣಗಳಿದ್ದಲ್ಲಿ ಕೃಷಿ ಅಧಿಕಾರಿಗಳು ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಹಾಯ ಪಡೆದು ದಾಳಿ ನಡೆಸಿ ಎಂದರು. ರಸಗೊಬ್ಬರ ಮಾರಾಟ ಸಂದರ್ಭದಲ್ಲಿ ಕೆಲವು ಭಾಗದ ಅಂಗಡಿಗಳಲ್ಲಿ ಹೆಚ್ಚು ರೈತ ಗ್ರಾಹಕರಿದ್ದು, ನೂಕು ನುಗ್ಗಲು ಉಂಟಾಗುವ ಸಾಧ್ಯತೆ ಇರುತ್ತದೆ. ಮೊದಲೇ ಮಾಹಿತಿ ನೀಡಿ ಪೊಲೀಸ್ ಪೇದೆಗಳನ್ನು ನಿಯೋಜಿಸಿಕೊಂಡು ಯಾವುದೇ ಗೊಂದಲ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದರು. ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್ ಮಾಹೆಯಲ್ಲಿ ಯೂರಿಯಾ ಬೇಡಿಕೆ ಹೆಚ್ಚಿರುತ್ತದೆ. ಅಭಾವ ಉಂಟಾಗಬಹುದು ಎಂದು ಹೆಚ್ಚು ಖರೀದಿಸುವುದು, ಬೇರೆ ಜಿಲ್ಲೆಯವರು ಖರೀದಿಸುವ ಸಾಧ್ಯತೆ ಇರುತ್ತದೆ. ಇವುಗಳ ಬಗ್ಗೆ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು ಎಂದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಂಟಿ ಕೃಷಿ ನಿರ್ದೇಶಕ ಅಶೋಕ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ದಿನೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು ‌

ಆಂದೋಲನ ಡೆಸ್ಕ್

Recent Posts

ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಂದ ದೂರವಿರಿ : ಕಮಿಷನರ್‌ ಸೀಮಾ ಲಾಟ್ಕರ್‌

ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…

8 mins ago

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

42 mins ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

1 hour ago

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

1 hour ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

2 hours ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

3 hours ago