ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಂಡ್ಯ ತಾಲೂಕು ಗುನ್ನಾಯಕನಹಳ್ಳಿ ಗ್ರಾಮದ ನರ್ಸಿಂಗ್ ವಿದ್ಯಾರ್ಥಿನಿ ನಿಶ್ಕಲ(21) ಆತ್ಮಹತ್ಯೆ ಮಾಡಿಕೊಂಡವರು.
ಕೇವಲ ಹತ್ತು ದಿನಗಳ ಅಂತರದಲ್ಲೇ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಜು.21ರಂದು ಕೊಪ್ಪಳ ಮೂಲದ ಮೆಡಿಕಲ್ ವಿದ್ಯಾರ್ಥಿ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದನು. ಇದೀಗ ನರ್ಸಿಂಗ್ ವಿದ್ಯಾರ್ಥಿನಿ ನಿಶ್ಕಲ(21) ಆತ್ಮಹತ್ಯೆಗೆ ಶರಣಾಗಿದ್ದಾಳೆ.
ನಿಶ್ಕಲ ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಹಾಸ್ಟೆಲ್ ನಲ್ಲೇ ವಾಸ್ತವ್ಯವಿದ್ದ ಈಕೆ, ಸಹಪಾಠಿಯು ಪಕ್ಕದ ರೂಂಗೆ ತೆರಳಿದ್ದ ವೇಳೆ ಹಾಸ್ಟೆಲ್ ಕೊಠಡಿಯ ಫ್ಯಾನ್‌ಗೆ ನೇಣುಬಿಗಿದುಕೊಂಡು ಮೃತಪಟ್ಟಿದ್ದಾಳೆ.
ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಡ್ಯ ಪೂರ್ವ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…