ಮಂಡ್ಯ/ಮದ್ದೂರು: ತಾಲೂಕಿನ ದೇಶಹಳ್ಳಿ ಗ್ರಾಮದ ಗಾಂಧಿನಗರದಲ್ಲಿ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಕೆಸರುಮಯ ರಸ್ತೆಯಲ್ಲಿ ನಾಟಿ ಮಾಡಿ ಸಮಸ್ಯೆ ಅನಾವರಣಗೊಳಿಸಿದರು.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಶೀಘ್ರವಾಗಿ ರಸ್ತೆ ಮಾಡಬೇಕು ಎಂದು ಆಗ್ರಹಿಸಿದರು.
ಗ್ರಾಮದ ರಸ್ತೆಗಳು ಹಲವು ವರ್ಷಗಳಿಂದ ಹದಗೆಟ್ಟಿದ್ದು, ಪ್ರತಿನಿತ್ಯ ಓಡಾಡಲು ತೊಂದರೆಯಾಗಿದೆ. ಶಾಲಾ-ಕಾಲೇಜಿಗೆ ತೆರಳುವ ಮಕ್ಕಳ ಕಷ್ಟ ಹೇಳತೀರದಾಗಿದೆ. ಈ ರಸ್ತೆಯಲ್ಲಿ ಚಾಲಾಯಿಸುವ ದ್ವಿಚಕ್ರ ಸಾವಾರರು ಜಾರಿ ಬಿದ್ದು ಗಾಯ ಮಾಡಿಕೊಂಡಿರುವ ಘಟನೆಗಳಿವೆ. ಹೀಗಾಗಿ ತಕ್ಷಣವೇ ರಸ್ತೆ ದುರಸ್ತಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…