ಮಂಡ್ಯ : ನಗರದ ಕ್ಲೌಡ್ 11 ಹೆಸರಿನ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ದಂಧೆ ನಡೆಸುತ್ತಿದ್ದ ಸಲೂನ್ ಮಾಲಕಿ ರಾಣಿ, ಓರ್ವ ಪಿಂಪ್, ಓರ್ವ ಗ್ರಾಹಕ ಬಂಧಿತರು.
ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾಳಿ ಮಾಡಿದ್ದಾರೆ.
ಹಲವು ವರ್ಷಗಳಿಂದ ಇದೇ ದಂಧೆಯಲ್ಲಿ ತೊಡಗಿರುವ ಸಲೂನ್ ಮಾಲಕಿ ರಾಣಿ ವಿರುದ್ಧ ಈ ಹಿಂದೆ ಮೈಸೂರು, ಮಂಡ್ಯದಲ್ಲೂ ಪ್ರಕರಣ ದಾಖಲಾಗಿದ್ದವು. ಅದರಲ್ಲೂ ಈ ಹಿಂದೆಯೂ ಇದೇ ಸ್ಪಾ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿದ್ದರು. ಅಲ್ಲದೇ ಮೈಸೂರು, ಮಂಡ್ಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪವಿದೆ.
ಒಮ್ಮೆ ಸೀಜ್ ಆಗಿದ್ದರೂ ಮತ್ತೆ ದಂಧೆ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಕಟ್ಟಡ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂದು ಒಡನಾಡಿ ಸಂಸ್ಥೆ ಆಗ್ರಹಿಸಿದೆ.
ಈ ಬಗ್ಗೆ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್, ಸಿಪಿಐ ನವೀನ್ ಸುಪ್ಪೇಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ತಂಡದಲ್ಲಿದ್ದರು.





