ಮಂಡ್ಯ

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ; ಇಬ್ಬರ ಬಂಧನ, ನಾಲ್ವರು ಮಹಿಳೆ ರಕ್ಷಣೆ

ಮಂಡ್ಯ : ನಗರದ ಕ್ಲೌಡ್‌ 11 ಹೆಸರಿನ ಯೂನಿಸೆಕ್ಸ್‌ ಸಲೂನ್‌ ಅಂಡ್‌ ಸ್ಪಾದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ದಂಧೆ ನಡೆಸುತ್ತಿದ್ದ ಸಲೂನ್‌ ಮಾಲಕಿ ರಾಣಿ, ಓರ್ವ ಪಿಂಪ್, ಓರ್ವ ಗ್ರಾಹಕ ಬಂಧಿತರು.

ಸಲೂನ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾಳಿ ಮಾಡಿದ್ದಾರೆ.

ಹಲವು ವರ್ಷಗಳಿಂದ ಇದೇ ದಂಧೆಯಲ್ಲಿ ತೊಡಗಿರುವ ಸಲೂನ್ ಮಾಲಕಿ ರಾಣಿ ವಿರುದ್ಧ ಈ ಹಿಂದೆ ಮೈಸೂರು, ಮಂಡ್ಯದಲ್ಲೂ ಪ್ರಕರಣ ದಾಖಲಾಗಿದ್ದವು. ಅದರಲ್ಲೂ ಈ ಹಿಂದೆಯೂ ಇದೇ ಸ್ಪಾ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿದ್ದರು. ಅಲ್ಲದೇ ಮೈಸೂರು, ಮಂಡ್ಯದ ವಿವಿಧ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲೂ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪವಿದೆ.

ಒಮ್ಮೆ ಸೀಜ್ ಆಗಿದ್ದರೂ ಮತ್ತೆ ದಂಧೆ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಕಟ್ಟಡ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಬೇಕು ಎಂದು ಒಡನಾಡಿ ಸಂಸ್ಥೆ ಆಗ್ರಹಿಸಿದೆ.

ಈ ಬಗ್ಗೆ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶುರಾಮ್, ಸಿಪಿಐ ನವೀನ್ ಸುಪ್ಪೇಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಪೊಲೀಸ್‌ ಸಿಬ್ಬಂದಿ ಕಾರ್ಯಾಚರಣೆ ತಂಡದಲ್ಲಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

18 hours ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

18 hours ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

1 day ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

1 day ago