ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ ಗಾಂಧಿನಗರದಲ್ಲಿ ಜರುಗಿದೆ.
ನವೀದ್ ಎಂಬಾತನೇ ಸಿಕ್ಕಿಬಿದ್ದಿರುವ ಕಳ್ಳ. ಕಳ್ಳತನ ಆರೋಪದಡಿ ಈತನನ್ನು ವಿಚಾರಣೆಗಾಗಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತಂದಿದ್ದ ವೇಳೆ ಬೇಡಿ ಸಮೇತ ಪೊಲೀಸರ ಕಣ್ತಪ್ಪಿಸಿ ಠಾಣೆಯಿಂದ ತಪ್ಪಿಸಿಕೊಂಡಿದ್ದನು. ಬೇಡಿ ಹಾಕಿಕೊಂಡು ಸಾರ್ವಜನಿಕವಾಗಿ ಓಡಾಡುತ್ತಾ ಜನರಲ್ಲಿ ಆತಂಕ ಮೂಡಿಸಿ ದ್ದನು.
ಠಾಣೆಯಿಂದ ತಪ್ಪಿಸಿಕೊಂಡು ಬಂದ ನವೀದ್ ಗಾಂಧಿನಗರದಲ್ಲಿರುವ ಮನೆ ಯೊಂದರ ಕಾಂಪೌಂಡ್ ಹಾರಿದ್ದಾನೆ. ಈ ವೇಳೆ ಅನುಮಾನಗೊಂಡು ಆತ ನನ್ನು ಹಿಂಬಾಲಿಸಿದ್ದ ಸ್ಥಳೀಯರು ಆತ ನನ್ನು ಅಟ್ಟಿಸಿಕೊಂಡು ಹೋಗಿ ಹಿಡಿದಿ ದ್ದಾರೆ. ಬಳಿಕ ವಿಚಾರಿಸಿದಾಗ ಕಳ್ಳತನ ಪ್ರಕ ರಣವೊಂದರಲ್ಲಿ ಸಿಕ್ಕಿಬಿದ್ದು ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿ ದ್ದಾಗಿ ಹೇಳಿದ್ದಾನೆ. ನಂತರ ಪೊಲೀಸ ರಿಗೆ ಮಾಹಿತಿ ನೀಡಿ, ನವೀದ್ನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…