ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್ ಏಜೆಂಟ್ ಗಳ ವಿವರವನ್ನು ಚುನಾವಣಾ ಶಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕುಮಾರ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷದ ಮುಖಂಡರ ಸಭೆಯನ್ನು ಇಂದು ನಡೆಸಲಾಗುತ್ತಿದೆ ಎಂದರು.
ಚುನಾವಣೆ ನಡೆಸುವ ನಿಯಮಗಳು ಹಾಗೂ ಮತದಾರರ ನೋಂದಣಿ, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಇತರೆ ಚುನಾವಣಾ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳಿಂದ ಯಾವುದಾದರೂ ಸಲಹೆಗಳಿದ್ದಲ್ಲಿ ತಿಳಿಸಿ, ಜೊತೆಗೆ ಮತಗಟ್ಟೆ ಮಟ್ಟದ ಏಜೆಂಟರ ನೇಮಕ ಮಾಡಿ ಮಾಹಿತಿ ನೀಡಲು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಬಿ.ಸಿ. ಶಿವಾನಂದಮೂರ್ತಿ, ಮಂಡ್ಯ ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ,
ಚುನಾವಣಾ ತಹಸೀಲ್ದಾರ್ ರವಿಶಂಕರ್,ಚಿ.ಜಿ. ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಡಿ.ರಮೇಶ್, ಸುಂಡಹಳ್ಳಿ ಮಂಜುನಾಥ್, ದಿನೇಶ್, ಬೂದನೂರು ಬೊಮ್ಮಯ್ಯ, ರಮೇಶ್ ಹಾಜರಿದ್ದರು.