ಮಂಡ್ಯ

ಮಂಡ್ಯ | ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರ ವಿವರ ಸಲ್ಲಿಸಿ ; ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್ ಏಜೆಂಟ್ ಗಳ ವಿವರವನ್ನು ಚುನಾವಣಾ ಶಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕುಮಾರ  ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿ ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷದ ಮುಖಂಡರ ಸಭೆಯನ್ನು ಇಂದು ನಡೆಸಲಾಗುತ್ತಿದೆ ಎಂದರು.

ಚುನಾವಣೆ ನಡೆಸುವ ನಿಯಮಗಳು ಹಾಗೂ ಮತದಾರರ ನೋಂದಣಿ, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಇತರೆ ಚುನಾವಣಾ ವಿಷಯಗಳ ಬಗ್ಗೆ ಚರ್ಚಿಸಲಾಯಿತು ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳಿಂದ ಯಾವುದಾದರೂ ಸಲಹೆಗಳಿದ್ದಲ್ಲಿ ತಿಳಿಸಿ, ಜೊತೆಗೆ ಮತಗಟ್ಟೆ ಮಟ್ಟದ ಏಜೆಂಟರ ನೇಮಕ ಮಾಡಿ ಮಾಹಿತಿ ನೀಡಲು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಬಿ.ಸಿ. ಶಿವಾನಂದಮೂರ್ತಿ, ಮಂಡ್ಯ ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ,
ಚುನಾವಣಾ ತಹಸೀಲ್ದಾರ್ ರವಿಶಂಕರ್,ಚಿ.ಜಿ. ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಡಿ.ರಮೇಶ್, ಸುಂಡಹಳ್ಳಿ ಮಂಜುನಾಥ್, ದಿನೇಶ್, ಬೂದನೂರು ಬೊಮ್ಮಯ್ಯ, ರಮೇಶ್  ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

38 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

41 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

45 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

49 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

58 mins ago