ಮಂಡ್ಯ

ಮಂಡ್ಯ | ನಿವೇಶನ ರಹಿತರ ಪಟ್ಟಿ ಸಿದ್ಧಪಡಿಸಿ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ನಗರದ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಸರ್ವೆ ನಡೆಸಿ ವಸತಿ ಮತ್ತು ನಿವೇಶನ ರಹಿತರ ಪಟ್ಟಿಯನ್ನು ಸಿದ್ಧಪಡಿ‌ಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂದು (ಜೂ.18) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಗಳ ಅಡಿ ಅರ್ಹ ಫಲಾನುಭವಿಗಳಿಗೆ ಸವಲತ್ತು ನೀಡಿ ಎಂದು ಸೂಚಿಸಿದರು.

ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ, ವಾಜಪೇಯಿ ನಗರ ವಸತಿ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಗಳಡಿ ನಿರ್ಮಿಸಲಾಗುತ್ತಿರುವ ವಸತಿಗಳ ಕಾಮಗಾರಿಯನ್ನು ಚುರುಕುಗೊಳಿಸಿ ಪೂರ್ಣಗೊಳಿಸಿ ಎಂದು ತಾಕೀತು ಮಾಡಿದರು.

ನಗರ ಪ್ರದೇಶಗಳಿಗೆ ನೀಡಲಾಗುವ ನೀರಿನ ಗುಣಮಟ್ಟವನ್ನು ನಿಗಧಿತ ಅವಧಿಯೊಳಗೆ ಪರೀಕ್ಷೆ ನಡೆಸಿ, ನೀರಿನ ಗುಣಮಟ್ಟ ಪರೀಕ್ಷಿಸಲು ಪ್ರತಿದಿನ ಕನಿಷ್ಟ ಮೂರು ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಯ ನಂತರ ಅಗತ್ಯ ಪ್ಯಾರಾಮೀಟರ್ ಗಳಿಗಿಂತ ಕಮ್ಮಿ ಗುಣಮಟ್ಟವಿರುವ ಕುಡಿಯುವ ನೀರಿನ ಮಾದರಿ ಕಂಡುಬಂದಲ್ಲಿ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ನಗರ ಭಾಗಗಳಲ್ಲಿ ತ್ಯಾಜ್ಯ ವಿಲೇವಾರಿಯನ್ನು ಸರಿಯಾಗಿ ನಿರ್ವಹಿಸದೆ ಇರುವುದು ಗಮನಕ್ಕೆ ಬಂದಿದೆ, ಟೆಂಡರ್ ದಾರರೊಂದಿಗೆ ಮಾತನಾಡಿ ಸರಿಯಾಗಿ ವಿಲೇವಾರಿ ಮಾಡಿಸಿ, ಇಲ್ಲವಾದಲ್ಲಿ ಟೆಂಡರ್ ರದ್ದು ಪಡಿಸಿ ಎಂದು ನಿರ್ದೇಶನ ನೀಡಿದರು.

ನಗರ ಪ್ರದೇಶಗಳ ಆಸ್ತಿ ತೆರಿಗೆ ವಸೂಲಾತಿಯಲ್ಲಿ ಪಾಂಡವಪುರ, ಬೆಳ್ಳೂರು, ನಾಗಮಂಗಲ ಹಿಂದುಳಿದಿದೆ, ನೀರಿನ ಶುಲ್ಕ ಪಾವತಿಯಲ್ಲಿ ನಾಗಮಂಗಲ ಮತ್ತು ಮಂಡ್ಯ ನಗರಗಳಲ್ಲಿ ನೀರಿನ ಶುಲ್ಕವನ್ನು ಹೆಚ್ಚಾಗಿ ಉಳಿಸಿಕೊಂಡಿದ್ದಾರೆ ತೆರಿಗೆ ಪಾವತಿಸದೆ ಇವವರಿಗೆ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣಕುಮಾರ್, ನಗರಸಭೆ ಅಧ್ಯಕ್ಷೆ ಪಂಪಶ್ರೀ, ನಗರಾಭಿವೃದ್ಧಿ ಕೋಶಾದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರತಾಪ್, ನಗರಸಭೆ ಪರಿಸರ ಅಭ್ಯಂತರ ರುದ್ರೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

6 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

6 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

7 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

7 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

7 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

8 hours ago