ಮಂಡ್ಯ: ಈ ಬಾರಿ ಸಕ್ಕರೆ ನಾಡಿನ ಮಂಡ್ಯ ಜಿಲ್ಲೆಯಲ್ಲಿ ಅಕ್ಕರೆಯಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20,21 ಹಾಗೂ 22 ರಂದು ಆಚರಿಸಲು ಸಿದ್ಧತೆ ನಡೆಸಿದೆ.
ಜಿಲ್ಲಾಡಳಿತ ಸ್ವಾಗತ ಸಮಿತಿ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿ, ವೇದಿಕೆ ನಿರ್ಮಾಣ ಸಮಿತಿ, ವೇದಿಕೆ ನಿರ್ವಹಣಾ ಸಮಿತಿ, ಆಹಾರ ಸಮಿತಿ, ಕುಡಿಯುವ ನೀರು ನಿರ್ವಹಣಾ ಸಮಿತಿ, ವಸತಿ ಸಮಿತಿ, ಸಾಂಸ್ಕೃತಿಕ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಮಾಧ್ಯಮ ಸಮನ್ವಯ ಸಮಿತಿ, ಆರೋಗ್ಯ ಮತ್ತು ವೈದ್ಯಕೀಯ ನೆರವು ಸಮಿತಿ, ಮೆರವಣಿಗೆ ಸಮಿತಿ, ನಗರ ಅಲಂಕಾರ ಮತ್ತು ವಿದ್ಯುತ್ ವ್ಯವಸ್ಥೆ ಸಮಿತಿ, ಸಾರಿಗೆ ಸಮಿತಿ, ಪುಸ್ತಕ ಆಯ್ಕೆ ಸಮಿತಿ, ನೋಂದಣಿ ಸಮಿತಿ, ಸ್ಮರಣಿಕೆ ಸಮಿತಿ, ಮಹಿಳಾ ಸಮಿತಿ, ಕನ್ನಡ ಜ್ಯೋತಿ ರಥ ನಿರ್ವಹಣಾ ಸಮಿತಿ, ಧ್ವಜ ನಿರ್ವಹಣಾ ಸಮಿತಿ, ಸ್ವಯಂ ಸೇವಕರು ಮತ್ತು ಉಸ್ತುವಾರಿ ಸಮಿತಿ, ಪಾಸ್ ಮತ್ತು ಬ್ಯಾಡ್ಜ್ ಸಮಿತಿ, ಸ್ವಚ್ಛತೆ ಮತ್ತು ನೈರ್ಮಲ್ಯ ಸಮಿತಿ, ವಸ್ತು ಪ್ರದರ್ಶನ ಸಮಿತಿ, ಶಿಷ್ಟಾಚಾರ ಸಮಿತಿ, ಸಮನ್ವಯ ಸಮಿತಿ, ಮೇಲುಸ್ತುವಾರಿ ಸಮಿತಿ ಸೇರಿದಂತೆ ಒಟ್ಟು 28 ಸಮಿತಿಗಳು ರಚಿಸಿ ಆದೇಶ ಹೊರಡಿಸಲಾಗಿದೆ.





