ಮಂಡ್ಯ

ಮಂಡ್ಯ: ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್

ಮಂಡ್ಯ: ಜಿಲ್ಲೆಯಲ್ಲಿ ಜುಲೈ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ತಿಳಿಸಿದರು.

ಅವರು ಶನಿವಾರ(ಜು.6) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.

ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠೆಕ್‌ಗಳನ್ನು ನಡೆಸಿದ್ದು, ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ಮೋಟಾರು ವಾಹನಗಳ ಪ್ರಕರಣಗಳು, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಜನತಾ ನ್ಯಾಯಾಲಯಗಳನ್ನು ಮಾಡಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.

ಲೋಕ ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಜೊತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ ವ್ಯಾಜ್ಯಪೂರ್ವ ಪ್ರಕರಣಗಳು (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು) ಇಂತಹ ಪ್ರಕರಣಗಳಿಗೆ ಉಭಯ ಪಕ್ಷಗಾರರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠೆಕ್ ನಡೆಸಿ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿಮಾಡಿಕೊಳ್ಳಬಹುದಾಗಿರುತ್ತದೆ ಎಂದು ಹೇಳಿದರು.

ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25 ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿರುವ ಶೇ. 5% ರಷ್ಟು ರಿಯಾಯಿತಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ತಪ್ಪದೇ ತಮ್ಮ ಆಸ್ತಿ ತೆರಿಗೆ ಪಾವತಿಸಿ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಲ್ಲಿ ನಾಳೆಯಿಂದ ಮಾಗಿ ಉತ್ಸವ

ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ  ಫಲಪುಷ್ಪ ಪ್ರದರ್ಶನ ಒಳಗೊಂಡ…

11 mins ago

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡಿಗರು ವಾಸಿಸುವ ನಾಡು: ಸಿಎಂ ಸಿದ್ದರಾಮಯ್ಯ

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…

16 mins ago

10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು: ಗೊ.ರು.ಚ ಹಕ್ಕೊತ್ತಾಯ

ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…

30 mins ago

ಕಾರು ಪಲ್ಟಿ; ಇಬ್ಬರಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…

44 mins ago

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ…

2 hours ago

ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯವಾಗಿದೆ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು…

2 hours ago