ಮಂಡ್ಯ: ಜಿಲ್ಲೆಯಲ್ಲಿ ಜುಲೈ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ಆನಂದ್ ತಿಳಿಸಿದರು.
ಅವರು ಶನಿವಾರ(ಜು.6) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.
ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠೆಕ್‌ಗಳನ್ನು ನಡೆಸಿದ್ದು, ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ಮೋಟಾರು ವಾಹನಗಳ ಪ್ರಕರಣಗಳು, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಜನತಾ ನ್ಯಾಯಾಲಯಗಳನ್ನು ಮಾಡಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಲೋಕ ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಜೊತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ ವ್ಯಾಜ್ಯಪೂರ್ವ ಪ್ರಕರಣಗಳು (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು) ಇಂತಹ ಪ್ರಕರಣಗಳಿಗೆ ಉಭಯ ಪಕ್ಷಗಾರರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠೆಕ್ ನಡೆಸಿ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿಮಾಡಿಕೊಳ್ಳಬಹುದಾಗಿರುತ್ತದೆ ಎಂದು ಹೇಳಿದರು.
ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25 ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿರುವ ಶೇ. 5% ರಷ್ಟು ರಿಯಾಯಿತಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ತಪ್ಪದೇ ತಮ್ಮ ಆಸ್ತಿ ತೆರಿಗೆ ಪಾವತಿಸಿ ಎಂದರು.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…