ಮಂಡ್ಯ: ಕೇಂದ್ರೀಯ ವಿದ್ಯಾಲಯವು ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಇದೀಗ ಸ್ವಂತ ಕಟ್ಟಡದ ಕಾಮಗಾರಿ ಕೆಲಸಗಳು ಅಂತಿಮ ಹಂತದಲ್ಲಿದ್ದು ಜೂನ್ 30 ರೊಳಗೆ ಕಾಮಗಾರಿ ಕೆಲಸಗಳು ಪೂರ್ಣಗೊಳ್ಳಲಿದೆ.
ಜಿಲ್ಲಾಧಿಕಾರಿ ಡಾ: ಕುಮಾರ, ಕಟ್ಟಡ ಕಾಮಗಾರಿ ಸಂಬಂಧ ಸಭೆಗಳನ್ನು ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡುತ್ತ ಬಂದಿದ್ದರು. ಕಾಮಗಾರಿ ಪೂರ್ಣಗೊಳುತ್ತಿರುವ ಹಿನ್ನಲೆ ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವಂತೆ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಗಳ ಸಂಘಟನಾ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ.
ಈ ಪತ್ರದೊಂದಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಸಹ ಭರ್ತಿ ಮಾಡಿಕೊಡುವಂತೆ ಸಹ ಪತ್ರ ಬರೆದಿದ್ದಾರೆ.





