ಮಂಡ್ಯ: ತಾಲ್ಲೂಕಿನ ದುದ್ದ ಹೋಬಳಿಯ ಬೀಚನಹಳ್ಳಿ ಗ್ರಾಮವೊಂದರ ಕಬ್ಬಿನ ಗದ್ದೆಯಲ್ಲಿ, ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.
ಗ್ರಾಮದ ನಿವಾಸಿ ಪುಟ್ಟಸ್ವಾಮಿ ಗೌಡ ಅವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಸರಿ ಸುಮಾರು 12 ಅಡಿ ಉದ್ದ 35 —40 ಕಿಲೋ ತೂಕದ ಇಂಡಿಯನ್ ರಾಕ್ ಪೈಥಾನ್ (ಹೆಬ್ಬಾವು) ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ. ಈ ವೇಳೆ ಎಚ್ಚೆತ್ತುಕೊಂಡ ಜಮೀನಿನ ಮಾಲೀಕ ಸರ್ಪ ಮಿತ್ರ ವೈದ್ಯ ಕುದರುಗುಂಡಿ ಮಹೇಶ್ ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಮಹೇಶ್ ಕುಮಾರ್ ಅವರು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು.
ಸುಮಾರು ವರ್ಷಗಳಿಂದ 5000ಕ್ಕೂ ಹೆಚ್ಚು ಉರಗ ಮತ್ತು ವನ್ಯ ಜೀವಿಗಳನ್ನು ರಕ್ಷಿಸುತ್ತಾ, ಅರಣ್ಯ ಇಲಾಖೆಗೆ ಸಹಾಯ ಮಾಡುತ್ತಿರುವ ಸ್ವಯಂಸೇವಕ ಸರ್ಪ ಮಿತ್ರ ಕುದರುಗುಂಡಿ ವೈದ್ಯ ಮಹೇಶ್ ಕುಮಾರ್ ಮತ್ತು ಇಲಾಖೆಯ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದರು. ಈ ವೇಳೆ ಅರಣ್ಯ ಇಲಾಖೆಯ ಗಸ್ತು ಅರಣ್ಯ ಪಾಲಕ ಸಿ. ರಾಜೇಶ್, ಹೆಚ್. ಪ್ರತಾಪ್ ಮತ್ತು ವಾಹನ ಚಾಲಕ ಚಂದ್ರು ಇದ್ದರು.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…