ಮಂಡ್ಯ : ಕೆ.ಆರ್.ಎಸ್ ಜಲಾಶಯ ತುಂಬಿದ್ದು, ಕೆರೆಗಳಿಗೆ ನೀರು ತುಂಬಿಸುವ ಕೆಲಸ ಪ್ರಗತಿಯಲ್ಲಿದ್ದರೂ ಕೆಲವು ಕೆರೆಗಳು ತುಂಬಿರುವುದಿಲ್ಲ. ಕೆರೆಗಳಿಗೆ ಒಳಹರಿವಿಗೆ ತೊಂದರೆಯಿದ್ದಲ್ಲಿ ಪರಿಶೀಲಿಸಿ ಪರಿಹರಿಸಿ ಎಂದು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ ಮೀನಾ ಅವರು ತಿಳಿಸಿದರು.
ಸೋಮವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಶೇ 100 ರಷ್ಟು ಕೆರೆಗಳನ್ನು ತುಂಬಿಸಿದರೆ ಬಹಳಷ್ಟು ಸಮಸ್ಯೆಗಳು ಪರಿಹಾರವಾಗುತ್ತದೆ. ಕೆರೆಗಳ ಒತ್ತುವರಿ, ಹೂಳು ತೆಗೆಯುವುದು, ಒಳಹರಿವಿನ ತೊಂದರೆಗಳನ್ನು ಪರಿಹರಿಸಲು ಯೋಜನೆ ರೂಪಿಸಿಕೊಳ್ಳಿ ಎಂದರು.
ಸಮಾಜಿಕ ಪಿಂಚಣಿಗಳನ್ನು ಪಾವತಿ ಮಾಡುವ ಸಂದರ್ಭದಲ್ಲಿ ಮರಣ ಹೊಂದಿರುವವರ ಮರಣ ಪ್ರಮಾಣ ಪತ್ರ ಪಡೆದು ಈ ಜನ್ಮ ಸಾಫ್ಟ್‌ವೇರ್ ನಲ್ಲಿ ಅಪ್ ಲೋಡ್ ಮಾಡಿಸಿ ಪಿಂಚಣಿ ಪಾವತಿ ನಿಲ್ಲಿಸಲು ಕ್ರಮವಹಿಸಿ ಎಂದರು.
ಅನ್ನ ಭಾಗ್ಯ ಹಾಗೂ ಗೃಹ ಲಕ್ಷ್ಮಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಅನರ್ಹರನ್ನು ಕೈಬಿಡಬೇಕು ಎಂಬ ಉದ್ದೇಶದಿಂದ ಸರ್ಕಾರದಿಂದ ಸಲಹೆ ಹಾಗೂ ಸೂಚನೆಗಳನ್ನು ನೀಡಲಾಗಿದೆ. ಅವುಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಎಂದು ಸೂಚನೆ ನೀಡಿದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 7136 ಅಭ್ಯರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದು, ಅವರಿಗೆ ಕೌಶಲ್ಯಭಿವೃದ್ಧಿ ತರಬೇತಿ ನೀಡಲು ಯುವನಿಧಿ ಪ್ಲಸ್ ಯೋಜನೆಯನ್ನು ಜಾರಿಗೆ ತರಲಾಗಿದೆ. 7136 ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆಯ ಆಧಾರದ ಮೇಲೆ ಇಂಜಿನಿಯರಿಂಗ್, ಪದವಿ , ಐಟಿಐ ಗುಂಪು ಮಾಡಿ ಅವರಿಗೆ ಉದ್ಯೋಗ ದೊರಕುವ ಕ್ಷೇತ್ರ ಗುರುತಿಸಿ ತರಬೇತಿ ನೀಡಿ ಎಂದರು.
ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣ ಉತ್ತಮವಾಗಿದ್ದರು, ಲಿಂಗನುಪಾತದ ವ್ಯತ್ಯಾಸ ಹೆಚ್ಚಿರುತ್ತದೆ. ಇದು ಸಮಾಜದಲ್ಲಿ ಹಾನಿಕಾರಕ ಬೆಳವಣಿಗೆಯಾಗಿರುತ್ತದೆ. ಎಲ್ಲಾ ಇಲಾಖೆ ಸಮನ್ವಯ ದಿಂದ ಕಾರ್ಯನಿರ್ವಹಿಸಿ ಹೆಣ್ಣು ಭ್ರೂಣ ಹತ್ಯೆ ಜಿಲ್ಲೆಯಲ್ಲಿ ಮರುಕಳಿಸದಂತೆ ಎಚ್ಚರಿಕೆ ವಹಿಸಿ ಎಂದರು.
ಇದನ್ನು ಓದಿ : ಮೈಸೂರು ದಸರಾ | ಮಾವುತ ಕಾವಾಡಿಗಳಿಗೆ ಕಿಟ್ ವಿತರಣೆ
ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಅವರಿಗೆ ಚಿಕಿತ್ಸೆ ನೀಡಿ. ಅಂಗನವಾಡಿ ಹಾಗೂ ಶಾಲಾ ಕೊಠಡಿಗಳು ಬೀಳುವ ಹಂತದಲ್ಲಿದ್ದರೆ ತಕ್ಷಣ ಬೇರೆ ವ್ಯವಸ್ಥೆ ಮಾಡಿ ಕೊಠಡಿ ದುರಸ್ತಿಯ ಬಗ್ಗೆ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿ ಎಂದರು.
ವಸತಿ ಶಾಲೆಗಳಲ್ಲಿ ವಿದ್ಯಭ್ಯಾಸ ಮಾಡುವ ವಿದ್ಯಾರ್ಥಿಗಳು 24 ಗಂಟೆಗಳ ಕಾಲ ವಸತಿ ಶಾಲೆಗಳಲ್ಲಿರುತ್ತಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ100 ರಷ್ಟು ಪಲಿತಾಂಶ ಬರುವಂತೆ ಯೋಜನೆ ರೂಪಿಸಿ ಎಂದರು.
ಇಂಡಿಯಾ ಸ್ಕಿಲ್ಸ್ 2025 ಸ್ಪರ್ಧೆಯಲ್ಲಿ ಹೆಸರು ನೊಂದಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದ್ದು, 16 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಹೆಸರು ನೊಂದಾಯಿಸಿಕೊಳ್ಳಬಹುದು ಎಂದರು.
ಜಿಲ್ಲಾಧಿಕಾರಿ ಡಾ: ಕುಮಾರ ಅವರು ಸಭೆಗೆ ಮಳೆಯ ಪ್ರಮಾಣ, ಬಿತ್ತನೆ ಬೀಜ, ಬೆಳೆ ಹಾನಿ, ಮನೆ ಹಾನಿ ಪ್ರಕರಣ, ರಸಗೊಬ್ಬರ, ಆಧಾರ್ ಸೀಡಿಂಗ್,ಭೂ ಸುರಕ್ಷಾ ಯೋಜನೆ ಹಾಗೂ ಮಿಮ್ಸ್ ನಲ್ಲಿ ಕೈಗೊಳ್ಳಬೇಕಿರುವ ಕೆಲಸಗಳ ಬಗ್ಗೆ ಸಭೆಗೆ ವಿವರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಮಾತನಾಡಿ ಸಭೆಗೆ ಮನರೇಗಾ, ಜಲ್ ಜೀವನ್ ಮಿಷನ್, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಕುರಿತಂತೆ ಸಭೆಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…