ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪತ್ರಕರ್ತೆ ಹರವು ಸ್ಪೂರ್ತಿ ಅವರ ಪತಿ, ಕೆ.ಎಂ.ದೊಡ್ಡಿ ವೆಂಕಟೇಶ್ ಅವರ ಪುತ್ರ ಬೆಂಗಳೂರಿನ ಖಾಸಗಿ ಕಂಪೆನಿಯ ಸಾಪ್ಟ್ ವೇರ್ ಇಂಜಿನಿಯರ್ ವಿ.ಮನು ಮೃತ ವ್ಯಕ್ತಿ.
ಶನಿವಾರ ಬೆಂಗಳೂರಿನಿಂದ ಸ್ವ-ಗ್ರಾಮ ಕೆ.ಎಂ.ದೊಡ್ಡಿಗೆ ಮನು ಟಾಟಾ ನಿಕ್ಸಾನ್ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದಾಗ ಮಳವಳ್ಳಿಯಿಂದ ಮದ್ದೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಬಸ್ ನ ಮುಂಬದಿಯ ಚಕ್ರ ಪಂಕ್ಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮನು ಅವರನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಗೆ ಕರೆತರುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತರಿಗೆ 6 ವರ್ಷದ ಮಗ ಸುಧನ್ವ, ಪತ್ನಿ ಪತ್ರಕರ್ತೆ ಹರವು ಸ್ಪೂರ್ತಿ ಹಾಗೂ ಪತ್ರಕರ್ತ, ಲೇಖಕ ಹರವು ದೇವೇಗೌಡ ಸೇರಿದಂತೆ ಅಪಾರ ಬಂಧುಗಳಿದ್ದಾರೆ. ಮೃತರ ಅಂತ್ಯಕ್ರಿಯೆ ಕೆ.ಎಂ.ದೊಡ್ಡಿ ಬಳಿಯ ಮೆಣಸಗೆರೆಯಲ್ಲಿ ನಾಳೆ ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…