ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಪ್ರತಿಯೊಬ್ಬರೂ ತೊಡಗಿಕೊಳ್ಳುವ ಉದ್ದೇಶದಿಂದ ಡಿ.17ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರು ಹಾಗೂ ಸಾಹಿತ್ಯ ಸಮ್ಮೇಳನದ ನಗರ ಅಲಂಕಾರ ಸಮಿತಿ ಅಧ್ಯಕ್ಷ ಪಿ. ರವಿಕುಮಾರ್ ತಿಳಿಸಿದರು.
ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ನಗರ ಪ್ರದೇಶದಲ್ಲಿ ಸುಮಾರು 2 ಲಕ್ಷ ಜನಸಂಖ್ಯೆಯಿದ್ದು, ಅವರೆಲ್ಲರೂ ಕನ್ನಡ ಸಾಹಿತ್ಯ ಸಮ್ಮೇಳನದ ಆಚರಣೆಯಲ್ಲಿ ತೊಡಗಬೇಕೆಂಬ ಉದ್ದೇಶದಿಂದ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಡಿ. 17 ರಂದು ಜಿಲ್ಲಾ ಕ್ರೀಡಾಂಗಣದಿಂದ ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗಿ ಸಂಜಯ ವೃತ್ತ, ಬೆಂಗಳೂರು -ಮೈಸೂರು ಹೆದ್ದಾರಿ ಮಾರ್ಗವಾಗಿ ಸ್ಯಾಂಜೊ ಆಸ್ಪತ್ರೆಯ ಹಿಂಭಾಗದವರೆಗೆ ಸಮ್ಮೇಳನ ನಡೆಯುವ ಸ್ಥಳದವರೆಗೆ ನಡೆಯಲಿದೆ ಎಂದರು.
ಸ್ಪರ್ಧೆಯಲ್ಲಿ ಎಲ್ಲರ ಬೆಂಬಲ ಅಗತ್ಯವಾಗಿದ್ದು, ಜಿಲ್ಲೆಯ ಎಲ್ಲಾ ವಯೋಮಾನದವರು ಭಾಗವಹಿಸಿ ಸ್ಪರ್ಧೆಯನ್ನು ಯಶಸ್ವಿಗೊಳಿಸಬೇಕು ಎಂದು ಕರೆಕೊಟ್ಟರು.
ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಡಿ.10 ರಿಂದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಬಿಟ್ಟು ಬೇರೆ ಯಾವುದೇ ರೀತಿಯ ಬ್ಯಾನರ್ ಗಳನ್ನು ಅಳವಡಿಸಬಾರದು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಡಿಸೆಂಬರ್ 20,21,22 ರಂದು 3 ದಿನಗಳ ಕಾಲ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಹಳ ವಿಶೇಷ ಹಾಗೂ ವಿನೂತನ ರೀತಿಯಲ್ಲಿ ಏರ್ಪಡಿಸಲು ಕನ್ನಡಕ್ಕಾಗಿ ಓಟ ಎಂಬ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದರು.
ಶಾಲಾ ಕಾಲೇಜು ವಿದ್ಯಾರ್ಥಿಗಳು, ಎನ್ ಎಸ್ ಎಸ್, ಎನ್ ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಕನ್ನಡಪರ ಸಂಘಟನೆಗಳು, ಲಯನ್ಸ್ ಕ್ಲಬ್, ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.
ಸ್ಪರ್ಧೆಗೆ ಮುಖ್ಯವಾಗಿ ಬೇಕಾದ ಸಿದ್ಧತೆಗಳನ್ನು ಇಂದಿನಿಂದಲೇ ಪ್ರಾರಂಭಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳ ಓಟಕ್ಕೆ ಅಡಚಣೆಯಾಗದಂತೆ ಟ್ರಾಫಿಕ್ ಪೊಲೀಸರು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಓಟದ ಮಾರ್ಗದಲ್ಲಿ ಪ್ರತಿ 500 ಮೀಟರ್ ಗೆ ವೈದ್ಯರ ತಂಡ ಹಾಗೂ ಕುಡಿಯುವ ನೀರಿನ ಸೌಲಭ್ಯವಿರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ ಸಿ ಶಿವಾನಂದಮೂರ್ತಿ, ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕರಾದ ಮೀರಾ ಶಿವಲಿಂಗಯ್ಯ, ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥ್, ನಗರಸಭೆ ಪೌರಾಯುಕ್ತರು ಪಂಪಾಶ್ರೀ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್ ಶಿವರಾಮೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚೆಲುವಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…