Mysore
17
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಮಂಡ್ಯ| ಇಂದಿನಿಂದ ಬಿತ್ತನೆ ಬೀಜ ಮಾರಾಟ ಪ್ರಾರಂಭ

ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಇತ್ತ ಕೃಷಿ ಚಟುವಟಿಕೆಯು ಸಹ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ(ಜು.19) ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಲಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದ್ದು, ರೈತರಿಗೆ ಅನುಕೂಲವಾಗುವಂತೆ ಬೇಡಿಕೆಗಿಂತ ಹೆಚ್ಚಿನ ಬಿತ್ತನೆ ಬೀಜ ಜಿಲ್ಲೆಯಲ್ಲಿದೆ. ರೈತರಿಗೆ ಅನುಕೂಲವಾಗುವಂತೆ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಇಂದಿನಿಂದ ಬೆಳಿಗ್ಗೆ 8 ಗಂಟೆಗೆ ಖರೀದಿ ಕೇಂದ್ರಗಳು ತೆರಯಲಿದೆ ಎಂದರು.

ದಾಸ್ತಾನು ವಿವರ ಪ್ರಕಟಿಸಿ
ರೈತ ಸಂಪರ್ಕ ಕೇಂದ್ರ, ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ರಸಗೊಬ್ಬರ ಮಾರಾಟ ಕೇಂದ್ರಗಳಲ್ಲಿ ಯಾವುದೇ ನೂಕು ನುಗ್ಗಲು ಉಂಟಾಗದಂತೆ ವ್ಯವಸ್ಥೆ ಮಾಡಿ. ದಾಸ್ತಾನು ‌ಇರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿವರವನ್ನು ಪ್ರಕಟಿಸಿ ಇದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದು ಮನವರಿಕೆ ಆಗುತ್ತದೆ ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ತಹಶೀಲ್ದಾರ್ ಹಾಗೂ ಕೃಷಿ ಸಹಾಯಕ ನಿರ್ದೇಶಕರು ಪ್ರತಿ ದಿನ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗಳು ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಿ ಸೌಹರ್ದತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದೇನೆ. ಬಿತ್ತನೆ ಬೀಜಗಳ ಮೊಳಕೆ ಹೊಡೆಯುವ ಪರೀಕ್ಷೆಗಳನ್ನು (germination test) ಕಡ್ಡಾಯವಾಗಿ ಇಲಾಖೆ ನೀಡಿರುವ ಸೂಚನೆಗಳಂತೆ ಅಧಿಕಾರಿಗಳು ನಡೆಸಬೇಕು ಎಂದು ತಿಳಿಸಿದ್ದೇನೆ ಎಂದು ಹೇಳಿದರು.

Tags:
error: Content is protected !!