ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಇತ್ತ ಕೃಷಿ ಚಟುವಟಿಕೆಯು ಸಹ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಇಂದಿನಿಂದ(ಜು.19) ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಲಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ ನೀಡಿದ್ದು, ರೈತರಿಗೆ ಅನುಕೂಲವಾಗುವಂತೆ ಬೇಡಿಕೆಗಿಂತ ಹೆಚ್ಚಿನ ಬಿತ್ತನೆ ಬೀಜ ಜಿಲ್ಲೆಯಲ್ಲಿದೆ. ರೈತರಿಗೆ ಅನುಕೂಲವಾಗುವಂತೆ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಇಂದಿನಿಂದ ಬೆಳಿಗ್ಗೆ 8 ಗಂಟೆಗೆ ಖರೀದಿ ಕೇಂದ್ರಗಳು ತೆರಯಲಿದೆ ಎಂದರು.
ದಾಸ್ತಾನು ವಿವರ ಪ್ರಕಟಿಸಿ
ರೈತ ಸಂಪರ್ಕ ಕೇಂದ್ರ, ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ರಸಗೊಬ್ಬರ ಮಾರಾಟ ಕೇಂದ್ರಗಳಲ್ಲಿ ಯಾವುದೇ ನೂಕು ನುಗ್ಗಲು ಉಂಟಾಗದಂತೆ ವ್ಯವಸ್ಥೆ ಮಾಡಿ. ದಾಸ್ತಾನು ಇರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿವರವನ್ನು ಪ್ರಕಟಿಸಿ ಇದರಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದು ಮನವರಿಕೆ ಆಗುತ್ತದೆ ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
ತಹಶೀಲ್ದಾರ್ ಹಾಗೂ ಕೃಷಿ ಸಹಾಯಕ ನಿರ್ದೇಶಕರು ಪ್ರತಿ ದಿನ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗಳು ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಿ ಸೌಹರ್ದತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದ್ದೇನೆ. ಬಿತ್ತನೆ ಬೀಜಗಳ ಮೊಳಕೆ ಹೊಡೆಯುವ ಪರೀಕ್ಷೆಗಳನ್ನು (germination test) ಕಡ್ಡಾಯವಾಗಿ ಇಲಾಖೆ ನೀಡಿರುವ ಸೂಚನೆಗಳಂತೆ ಅಧಿಕಾರಿಗಳು ನಡೆಸಬೇಕು ಎಂದು ತಿಳಿಸಿದ್ದೇನೆ ಎಂದು ಹೇಳಿದರು.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…