ಮಂಡ್ಯ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾಗಿದ್ದ ಶಿವಾನಂದ ಮೂರ್ತಿ ಅವರನ್ನು ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣ ಜಾರಿಗೆ ಬರುವಂತೆ ಹಿಂದಿನ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು ಅವರ ಜಾಗಕ್ಕೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಬಿ.ಸಿ ಶಿವಮೂರ್ತಿ ಅವರು ಈ ಹಿಂದೆ ಪಾಂಡವಪುರ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಹೆಚ್.ಎಲ್ ನಾಗರಾಜು ಅವರು ಸನ್ಯಾಸತ್ವ ಸ್ವೀಕಾರ ಮಾಡುವುದು ಖಚಿತವಾಗಿದ್ದು, ಹೀಗಾಗಿ ಅವರು ತಮ್ಮ ಕರ್ತವ್ಯಕ್ಕೆ ಸುದೀರ್ಘ ರಜೆ ಹಾಕಿದ್ದಾರೆ ಎನ್ನಲಾಗಿದೆ.
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…
ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…