Mysore
19
clear sky

Social Media

ಶನಿವಾರ, 14 ಫೆಬ್ರವರಿ 2026
Light
Dark

ಮಂಡ್ಯ: ಜಿಲ್ಲೆಯಲ್ಲಿ ಆಗಸ್ಟ್ 20 ರಿಂದ ಅಕ್ಟೋಬರ್ 18 ರವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ: ಡಾ ಕುಮಾರ

ಮಂಡ್ಯ: ಭಾರತೀಯ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01 ಜನವರಿ 2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿರುವ ಸಂಬಂಧ ಜಿಲ್ಲೆಯಲ್ಲಿ ಆಗಸ್ಟ್ 20 ರಿಂದ ಅಕ್ಟೋಬರ್ 18 ರವರೆಗೆ ಮತದಾರರ ಪಟ್ಟಿಯ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

ಅವರು ಇಂದು(ಆ.17) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2025 ರ ಸಂಬಂಧ ವೀಡಿಯೊ ಸಂವಾದ ಸಭೆಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ 18 ವರ್ಷ ತುಂಬಿರುವ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಅಗತ್ಯವಿರುವ ಕಡೆ ಮತದಾರರ ಪಟ್ಟಿಯಲ್ಲಿನ ಗುಣಮಟ್ಟವಿಲ್ಲದ ಭಾವಚಿತ್ರಗಳನ್ನು ಬದಲಾಯಿಸಿ ಮತದಾರರ ಉತ್ತಮ ಗುಣಮಟ್ಟದ ಭಾವಚಿತ್ರಗಳನ್ನು ಅಳವಡಿಸಲಾಗುವುದು ಎಂದರು.

ಮತಗಟ್ಟೆಗಳ ಭೌತಿಕ ಪರಿಶೀಲನೆ ನಡೆಸುವುದು, 1 ಮತಗಟ್ಟೆಯಲ್ಲಿ 1500 ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿದ್ದರೆ ಅಲ್ಲಿ 2 ಮತಗಟ್ಟೆಯನ್ನು ಸ್ಥಾಪಿಸಲು ತಯಾರಿ ನಡೆಸಲಾಗುವುದು ಎಂದರು.

ಇ – ಜನ್ಮ ತಂತ್ರಾಶದಿಂದ ಜಿಲ್ಲೆಯಲ್ಲಿ ಮರಣ ಹೊಂದಿರುವ ಮತದಾರರ ವಿವರವನ್ನು ಪಡೆದು ಪರಿಶೀಲಿಸಿ ನಂತರ ಮರಣ ಹೊಂದಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗುವುದು ಎಂದರು.

ಜಿಲ್ಲೆಯ ಮತದಾರರ ಪಟ್ಟಿ/ಮತದಾರರ ಗುರುತಿನ ಚೀಟಿಗಳಲ್ಲಿ ಹೆಸರು, ವಿಳಾಸ ಮುಂತಾದ ಯಾವುದೇ ರೀತಿಯ ತಿದ್ದುಪಡಿಗಳು ಇದ್ದಲ್ಲಿ ಮತದಾರರು ಲೋಪದೋಷಗಳನ್ನು ಸರಿಪಡಿಸಿಕೊಂಡು ಪರಿಷ್ಕರಿಸಿಕೊಳ್ಳುವುದು. ಒಂದೇ ಕುಟುಂಬದ ಮತದಾರರನ್ನು ಒಂದೇ ಮತಗಟ್ಟೆಯಲ್ಲಿ ಹೆಸರು ಬರುವಂತೆ ಸರಿಪಡಿಸಲಾಗುವುದು ಎಂದರು.

ಜಿಲ್ಲೆಯ ಉಪ ವಿಭಾಗಾಧಿಕಾರಿಗಳು ಮತದಾರರ ನೊಂದಣಾಧಿಕಾರಿಯಾಗಿ ಹಾಗೂ ತಹಶೀಲ್ದಾರರು ಸಹಾಯಕ ನೋಂದಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು, ಉಪ ವಿಭಾಗಧಿಕಾರಿ ನಂದೀಶ್, ಚುನಾವಣಾ ತಹಶೀಲ್ದಾರ್ ರವಿಶಂಕರ್ ಸಿ ಜಿ ಹಾಗೂ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!