ಮಂಡ್ಯ: ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನವೆಂಬರ್ ೧ರಿಂದ ಡಿಸೆಂಬರ್ ೧ರವರೆಗೆ ನಡೆಸಲಾಗುವುದು ಎಂದು ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷ ಗಂಗಾಧರ್ ರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ೩೧ ಜಿಲ್ಲೆಗಳ ಪೈಕಿ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ೩೨ ತಂಡಗಳನ್ನು ರಚಿಸಲಾಗಿದ್ದು, ಒಟ್ಟು ೬೯೯ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಸದರಿ ಪಂದ್ಯಾವಳಿಯು ಮುಂದಿನ ಪೀಳಿಗೆಯ ಕ್ರಿಕೆಟ್ ಪ್ರತಿಭೆಗೆ ವೇದಿಯಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಪಂದ್ಯಾವಳಿಯು ಬೆಂಗಳೂರಿನ ಆಚಾರ್ಯ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಪಂದ್ಯಾವಳಿಯ ಪಂದ್ಯಗಳನ್ನು ೯ ಓವರ್‌ಗಳಿಗೆ ಸೀಮಿತಗೊಳಿಸಿದ್ದು, ಸಂಜೆ. ೭.೩೦ರಿಂದ ೯.೩೦ರವರೆಗೆ ಪಂದ್ಯಗಳು ನಡೆಯಲಿವೆ. ಎಲ್ಲ ಪಂದ್ಯಗಳನ್ನು ಪ್ರಸಾರ ಭಾರತಿಯ ಡಿ.ಡಿ.ಚಂದನದಲ್ಲಿ ನೇರ ಪ್ರಸಾರ ಮಾಡಲಾಗುವುದು. ಈ ಪಂದ್ಯಾವಳಿಯನ್ನು ಮುಂದಿನ ಹಂತಕ್ಕೆ ತಲುಪಿಸುವ ದೃಷ್ಠಿಯಿಂದ ರಾಷ್ಟç ಮಟ್ಟದ ಪಂದ್ಯಾವಳಿಗಳಿಗೆ ಯೋಜನೆ ರೂಪಿಸಲಾಗುತ್ತದೆ. ಇದಕ್ಕಾಗಿ ರಾಜ್ಯದಿಂದ ೨೫ ಮಂದಿಯನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಗೋಷ್ಠಿಯಲ್ಲಿ ಬಾಗೇಗೌಡ, ಮೋಹನ್‌ಕುಮಾರ್, ಚನ್ನಬಸವಯ್ಯ, ರಾಜಶೇಖರ್, ಗಿರೀಶ್, ಮನು ಇದ್ದರು.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…