ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಸ್ಥರು, ಹೋಳಿ ಹಬ್ಬದ ಆಯೋಜಕರು ಹಾಗೂ ಆಹಾರ ತಯಾರಕಉ ಸೇರಿದಂತೆ ಆರು ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮಳವಳ್ಳಿ ಪಟ್ಟಣದಲ್ಲಿ ಶುಕ್ರವಾರದಂದು ಹೋಳಿ ಹಬ್ಬದ ಪ್ರಯುಕ್ತ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬವನ್ನು ಆಯೋಜಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಜು ಎಂಬುವವರ ಹೋಟೆಲ್‌ನಲ್ಲಿ ತರಕಾರಿ ಪಲಾವ್ ಮಾಡಿಸಲಾಗಿತ್ತು. ಇದನ್ನೇ ಕಾಗೇಪುರದ ಖಾಸಗಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಳಿಕೆ ತರಕಾರಿ ಪಲಾವ್ ಅನ್ನು ನೀಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ತರಕಾರಿ ಪಲಾವ್ ಅನ್ನು ತಿಂದ 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಒಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಅಲ್ಲದೇ ಶುಕ್ರವಾರ ಹೋಳಿಯಲ್ಲಿ ಭಾಗಿಯಾಗಿ ಉಪಹಾರ ಸೇವಿಸಿದ 30ಕ್ಕೂ ಅಧಿಕ ಮಂದಿಯೂ ಸಹ ಅಸ್ವಸ್ಥಗೊಂಡಿದ್ದರು.
ಯಾರ ಯಾರ ಮೇಲೆ ಎಫ್‌ಐಆರ್ ದಾಖಲು
ವಿದ್ಯಾರ್ಥಿಗಳು ಅಸ್ವಸ್ಥರಾದ ಕೇಸ್ ವಿಚಾರವಾಗಿ ಮಳವಳ್ಳಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಅವರು ನೀಡಿದ ದೂರಿನ ಆಧಾರದ ಮೇಲೆ ಹೋಳಿ ಆಯೋಜಕ ಪುಷ್ಪೇಂದ್ರ, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪ ಸಿಬ್ಬಂದಿ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆ ಮುಖ್ಯಸ್ಥ ಲಂಕೇಶ್, ಕಾರ್ಯದರ್ಶಿ ಜಗದೀಶ್ ಹಾಗೂ ಕೆಲಸಗಾರ ಜಗದೀಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…