ಮಂಡ್ಯ

ಮಂಡ್ಯ: ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಕಟಾವು ಮಾಡಬಾರದು: ಡಾ ಕುಮಾರ

ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದೇ ಮರುಕಳಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಎಚ್ಚರಿಕೆ ನೀಡಿದರು.

ಅವರು ಗುರುವಾರ(ಆ.29) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಡ್ಯ ಜಿಲ್ಲೆಯ 2024 ನೇ ಸಾಲಿನ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಬಗ್ಗೆ ಸಭೆ ನಡೆಸಿ ಮಾತನಾಡಿದರು.

2024 – 25 ನೇ ಸಾಲಿನ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಖರೀದಿ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಕೇಳಿ ಬರುತ್ತಿವೆ ಎಂದರು.

ಜಿಲ್ಲೆಯ 5 ಸಕ್ಕರೆ ಕಾರ್ಖಾನೆಗಳು ಒಗ್ಗೂಡಿ ಸಾಮರಸ್ಯದಿಂದ ಕಾರ್ಯ ನಿರ್ವಹಿಸಿ. ಜೊತೆಗೆ ರೈತರಿಗೆ ಸಕಾಲದಲ್ಲಿ ಎಫ್ ಆರ್ ಪಿ ಪ್ರಕಾರವ14 ದಿನದೊಳಗಾಗಿ ಕಬ್ಬು ಖರೀದಿ ವೆಚ್ಚವನ್ನು ಪಾವತಿಸಿ ಎಂದರು.

ಮಂಡ್ಯ ಜಿಲ್ಲೆಗೆ ಹೊರ ಜಿಲ್ಲೆಯಿಂದ ಕಬ್ಬು ಕಟಾವು ಮಾಡಲು ಬರುವ ಕೂಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಕಾರ್ಖಾನೆಯ ಮಾಲೀಕರ ಕರ್ತವ್ಯವಾಗಿದ್ದು, ಅವರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸಿ ಎಂದರು.

ಮೈಶುಗರ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಡಾ: ಹೆಚ್ ಎಲ್ ನಾಗರಾಜು ಅವರು ಮಾತನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ ಸರ್ಕಾರಿ ಸೌಮ್ಯದ ಕಾರ್ಖಾನೆಯಾಗಿದ್ದು, ಸೇವಾ ವಲಯದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಸೆಪ್ಟೆಂಬರ್ ಅಂತ್ಯದೊಳಗೆ 2.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ಈ ಕಬ್ಬು ಅರಿದ ನಂತರ ಉಳಿದರೆ ಮೈಶುಗರ್ ವ್ಯಾಪ್ತಿಯ ಕಬ್ಬನ್ನು ಬೇರೆ ಆಸಕ್ತ ಕಬ್ಬು ಕಾರ್ಖಾನೆಗೆ ನೀಡಲಾಗುವುದು ಎಂದರು.

ಇದಕ್ಕೆ ಪ್ರತಿಕ್ರಯಿಸಿದ ಜಿಲ್ಲಾಧಿಕಾರಿಗಳು ಐ.ಸಿ.ಎಲ್, ಚಾಮ್ ಶುಗರ್ ಸೇರಿದಂತೆ ಬೇರೆ ಕಾರ್ಖಾನೆಯ ಕಬ್ಬು ಜಟಾವು ಕಾರ್ಮಿಕರು ಒಟ್ಟು 100 ಬ್ಯಾಚನ್ನು 15 ದಿನಗಳ ಕಾಲ ಮೈಶುಗರ್ ಕಬ್ಬು ಕಟಾವಿಗೆ ನಿಯೋಜಿಸಿಕೊಡುವಂತೆ ತಿಳಿಸಿದರು.

ಸಭೆಯಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣದ ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿ ಡಿ ಗಂಗಾಧರ,ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

8 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

8 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

9 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

10 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

10 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

16 hours ago