ಮಂಡ್ಯ

ಮಂಡ್ಯ; ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿಯೊಳಗಿನ ಕಬ್ಬನ್ನು ಮಾತ್ರ ಖರೀದಿಸಬೇಕು; ಜಿಲ್ಲಾಧಿಕಾರಿ ಡಾ. ಕುಮಾರ

ಮಂಡ್ಯ:  ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ತಮಗೆ ನಿಗಧಿ ಮಾಡಿರುವ ವ್ಯಾಪ್ತಿಯಲ್ಲಿ ಮಾತ್ರ ರೈತರಿಂದ ಕಬ್ಬನ್ನು ಖರೀದಿಸಬೇಕು. ಅನಧಿಕೃತವಾಗಿ ಬೇರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ರೈತರಿಂದ ಕಬ್ಬು ಖರೀದಿಸಿದರೆ ಅಂತಹ ಸಕ್ಕರೆ ಕಾರ್ಖಾನೆಯ ಪರವಾನಿಗೆ ರದ್ದುಪಡಿಸಲು ಜಿಲ್ಲಾಧಿಕಾರಿ ಡಾ. ಕುಮಾರ ಎಚ್ಚರಿಕೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶುಗರ್ ಫ್ಯಾಕ್ಟರಿ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಬಾರಿ ಬರದ ಹಿನ್ನೆಲೆಯಲ್ಲಿ ಕಬ್ಬಿನ ಇಳುವರಿ ಸಹ ಕಡಿಮೆ ಇರುತ್ತದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವಿಕೆಗೆ ಸ್ಪರ್ಧೆ ಉಂಟಾಗುವ ಸಾಧ್ಯತೆಯಿದ್ದು, ಸಕ್ಕರೆ ಕಾರ್ಖಾನೆಗಳು ಲಾಭ/ ನಷ್ಟ ಯಾವುದೇ ಉಂಟಾದರು ತಮ್ಮ ವ್ಯಾಪ್ತಿಗೆ ನಿಗಧಿಪಡಿಸಿದ ಕಬ್ಬನ್ನು ಮಾತ್ರ ಅರೆಯಬೇಕು ಎಂದರು.

ಏಕ ಕಾಲದಲ್ಲಿ ಕಬ್ಬು ಅರೆಯುವಿಕೆಗೆ ಪ್ರಸ್ತಾವನೆ 2024 – 25 ನೇ ಸಾಲಿನ ಹಂಗಾಮಿನ ಕಬ್ಬು ಅರೆಯುವಿಕೆಗೆ ಸಂಬಂಧಿಸಿದಂತೆ ಯಾವುದಾದರು ಒಂದು ಸಕ್ಕರೆ ಕಾರ್ಖಾನೆ ಬೇರೆ ಸಕ್ಕರೆ ಕಾರ್ಖಾನೆಗಿಂತ ಮೊದಲು ಅರೆಯುವಿಕೆ ಪ್ರಾರಂಭಿಸಿದರೆ ಎಲ್ಲಾ ರೈತರು ತಮ್ಮ ಕಬ್ಬು ಖರೀದಿಸುವಂತೆ ಸಕ್ಕರೆ ಕಾರ್ಖಾನೆಗೆ ಮುಗಿ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳು ಏಕಕಾಲದಲ್ಲಿ ಕಬ್ಬು ಅರೆಯಲು ಜುಲೈ 15 ರಿಂದ 30 ರವರೆಗೆ ಯಾವುದಾದರು ಒಂದು ದಿನಾಂಕವನ್ನು ನಿಗಧಿಪಡಿಸಿಕೊಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬು ಬೆಳೆಯುವ ಪ್ರಕ್ರಿಯೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ನಡೆಸಬೇಕು. ರೈತರ ಕುಂದು ಕೊರತೆ ಸಭೆಯಲ್ಲಿ ರೈತರು ಕಬ್ಬು ಬಿತ್ತನೆಗೆ ಸಕ್ಕರೆ ಕಾರ್ಖಾನೆಗಳು ಬಿತ್ತನೆ ಕಬ್ಬು ಒದಗಿಸುವಂತೆ ಚರ್ಚಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ನಡೆಸುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಂತೆ ವರದಿ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಜಂಟಿ ಕೃಷಿ ನಿರ್ದೇಶಕ ಅಶೋಕ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಎಂ ಪಿ ಕೃಷ್ಣಕುಮಾರ್ ಸೇರಿದಂತೆ ವಿವಿಧ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

9 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

9 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

9 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

10 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

11 hours ago