ಮಂಡ್ಯ: ಅನೈತಿಕ ಸಂಬಂಧ ಶಂಕೆ ಹಿನ್ನೆಲೇ ಚಾಕುವಿನಿಂದ ದೊಡ್ಡಮ್ಮನ ಕತ್ತು ಕುಯ್ದು ಹತ್ಯೆ ಮಾಡಿದ ಘಟನೆ ನಗರದ ಆನೆಕೆರೆ ಬೀದಿಯಲ್ಲಿ ನಡೆದಿದೆ.
ವೃದ್ಧೆ ಕೆಂಪಮ್ಮ(80) ಕೊಲೆಯಾದ ಮಹಿಳೆ. ಕೊಲೆ ಆರೋಪಿ ಹರೀಶ್(34). ಎಂಬಾತ ತನ್ನ ತಂದೆಯೊಂದಿಗೆ ವಾಸವಿದ್ದ ದೊಡ್ಡಮ್ಮನನ್ನು ಹತ್ಯೆ ಮಾಡಿ ಬಳಿಕ, ಪೊಲೀಸರಿಗೆ ಶರಣಾಗಿದ್ದಾನೆ.
ಮೃತ ವೃದ್ಧೆ ಕೆಂಪಮ್ಮ ಗಂಡ ತೀರಿಹೋದ ನಂತರ ಆರೋಪಿಯ ತಂದೆ ರಾಮಕೃಷ್ಣ ಆಸರೆ ನೀಡಿ, ಹಲವು ವರ್ಷಗಳಿಂದ ಜೊತೆಗೆ ವಾಸವಾಗಿದ್ದರು. ಆರೋಪಿ ಹರೀಶ್ ತಂದೆ ತಾಯಿ ಬೇರೆಯಾಗಲೂ ಕೆಂಪಮ್ಮ ಕಾರಣ ಎಂಬ ದ್ವೇಷ ಕೂಡ ಇತ್ತು. ಕುಡಿದ ಮತ್ತಿನಲ್ಲಿ ಮಾತಿನ ಚಕಮಕಿ ನಡೆದು ಕೊನೆಗೆ ದೊಡ್ಡಮ್ಮನ್ನು ಹರೀಶ್ ಹತ್ಯೆ ಮಾಡಿದ್ದಾನೆ. ಬಳಿಕ ತಂದೆ ರಾಮಕೃಷ್ಣಗೆ ಕೆಂಪಮ್ಮನನ್ನು ಕೊಲೆಯ ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…