ಮಂಡ್ಯ

ಮಂಡ್ಯ | ಕೆರೆ ಅತಿಕ್ರಮಣ ಮಾಡದಂತೆ ಕ್ರಮವಹಿಸಿ

ಸಭೆಯಲ್ಲಿ ವಿ.ಅನ್ಬುಕುಮಾರ್‌ ಸೂಚನೆ
ಮಂಡ್ಯ : ಜಿಲ್ಲೆಯಲ್ಲಿರುವ ಕೆರೆಕಟ್ಟೆಗಳನ್ನು ಯಾರೂ ಅತಿಕ್ರಮಣ ಮಾಡದಂತೆ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು (ಮಾ.29) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಕೆ. ಡಿ. ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ, ಕೃಷ್ಣರಾಜಸಾಗರ ಅಣೆಕಟ್ಟಿನಲ್ಲಿ ಪ್ರಸ್ತುತ 106 ಅಡಿ ನೀರು ಸಂಗ್ರಹವಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 968 ಕೆರೆಗಳಿದ್ದು ಅದರಲ್ಲಿ 232 ಕೆರೆಗಳು ಶೇ 100 ರಷ್ಟು ಪ್ರಮಾಣದಲ್ಲಿ ನೀರು ಭರ್ತಿಯಾಗಿವೆ, 168 ಕೆರೆಗಳು ಶೇ 75 ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ನೀರು ಶೇಖರಣೆಯಾಗಿದೆ, ಕೆರೆ ಕಟ್ಟೆಗಳಿಗೆ ನೀರು ಪೂರೈಕೆ ಆಗದಂತೆ ಯಾರಾದರೂ ಅಡ್ಡಗಟ್ಟಿದ್ದರೆ ಅಂತಹವರನ್ನು ಗುರುತಿಸಿ ಸೂಕ್ತ ಕ್ರಮ ಜರುಗಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ, ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳನ್ನು ಗುರುತಿಸಲಾಗಿದೆ ಅಂತಹ ಗ್ರಾಮಗಳಿಗೆ ನೀರು ಪೂರೈಕೆ ಮಾಡಲು 160 ಖಾಸಗಿ ಕೊಳವೆ ಬಾವಿಗಳನ್ನು ಖರೀದಿಸಲಾಗಿದೆ, ಇನ್ನೂ 124 ಗ್ರಾಮಗಳಲ್ಲಿ ಕೊಳವೆಬಾವಿಯನ್ನು ಕೊರೆಯಲು ಸೂಕ್ತ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸಾಧ್ಯವಾದಷ್ಟು ಗಿಡ ಮರಗಳನ್ನು ಬೆಳೆಸಿ ಬೇಸಿಗೆ ಸಂದರ್ಭದಲ್ಲಿ ಅನುಕೂಲವಾಗುತ್ತದೆ, ಗಿಡ ನೇಡುವ ಸಂದರ್ಭದಲ್ಲಿ 2ಘಿ3 ಅಡಿ ಗುಂಡಿ ತೆಗೆದು ಗಿಡ ನೆಟ್ಟರೆ ಗಿಡಗಳು ಉತ್ತಮವಾಗಿ ಬೆಳೆಯುತ್ತವೆ, ಉತ್ತಮ ಪರಿಸರಕ್ಕೆ ಅಗತ್ಯವಿರುವ ಹಾಗೂ ವನ್ಯಜೀವಿಗಳಿಗೆ ಅನುಕೂಲವಾಗುವಂತಹ ಗಿಡ ಮರಗಳನ್ನು ಬೆಳೆಸಿ, ಪ್ರಸ್ತುತ ಇರುವ ಗಿಡ ಮರಗಳನ್ನು ಉಳಿಸಿ ಇದು ಅತಿ ಮುಖ್ಯವಾದ ಕೆಲಸ ಎಂದು ಹೇಳಿದರು.

ಜಿಲ್ಲೆಯ ಸರ್ಕಾರಿ ಬಸ್ಸುಗಳು ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಸಿತ್ತಿರುವುದು ಗಮನಕ್ಕೆ ಬಂದಿದೆ, ಸಾರ್ವಜನಿಕರ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಿ ಬಸ್ಸುಗಳಿಗೆ ಟೋಲ್ ಗಳಲ್ಲಿ ವಿನಾಯಿತಿ ಕಲ್ಪಿಸುವಂತೆ ಪ್ರಸ್ತಾವನೆ ಸಲ್ಲಿಸಿ ಎಂದರು.

ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮವಹಿಸಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ  ಮಾತನಾಡಿ, ಭೂ ಸುರಕ್ಷಾ ಯೋಜನೆಯಡಿ ಎಲ್ಲಾ ಕಂದಾಯ ದಾಖಲೆಗಳನ್ನು ಡಿಜೀಟಲೀಕರಣ ಮಾಡಲಾಗುತ್ತಿದೆ, ಪ್ರತಿ ದಿನಕ್ಕೆ 1000 ಭೂ ದಾಖಲೆ ಹಾಳೆಗಳನ್ನು ಸ್ಕ್ಯಾನ್ ಮಾಡಿ ಆಪ್ ಲೋಡ್ ಮಾಡಲಾಗುತ್ತಿದೆ, ಸದರಿ ವರ್ಷದಲ್ಲಿ 53 ಲಕ್ಷ ಹಾಳೆಗಳನ್ನು ಸ್ಕ್ಯಾನ್ ಮಾಡಿ ಆಪ್ ಲೋಡ್ ಮಾಡಲಾಗಿದೆ ಎಂದು ತಿಳಿಸಿದರು.

ರೈತ ಆತ್ಮಹತ್ಯೆ ಪ್ರಕರಣಗಳನ್ನು ಪರಿಶೀಲಿಸಿ ಪರಿಹಾರ ಧನ ನೀಡಲಾಗಿದೆ, ಜಿಲ್ಲೆಯ ಎಲ್ಲಾ ಕರೆಗಳ ಸರ್ವೆ ನಡೆಸಿ ಕೆರೆಯ ಸುತ್ತಳತೆಯನ್ನು ಗುರುತಿಸಲಾಗಿದೆ, ಸಂಬAಧಪಟ್ಟ ಇಲಾಖೆಯವರು ಯಾವುದೇ ಕಾರಣಕ್ಕೂ ಒತ್ತುವರಿ ಆಗದಂತೆ ನೋಡಿಕೊಳ್ಳಿ, ಸಾರ್ವಜನಿಕರ ಅನುಕೂಲಕ್ಕಾಗಿ ಅನಕೆರೆ ಮತ್ತು ಗೌಡಹಳ್ಳಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಶಿವಾನಂದ ಮೂರ್ತಿ, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ ಮೋಹನ್. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರಿ ಕೆ.ಎನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

4 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

4 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

5 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

6 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

6 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

6 hours ago