Mysore
34
scattered clouds

Social Media

ಸೋಮವಾರ, 30 ಮಾರ್ಚ್ 2026
Light
Dark

ಮಂಡ್ಯ | ಮೈಕ್ರೋ ಫೈನಾನ್ಸ್ ಸಂಸ್ಥೆಯ ಸಭೆ ಕರೆದ ಜಿಲ್ಲಾಧಿಕಾರಿ

ಮಂಡ್ಯ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಸಂಸ್ಥೆಯವರ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ಮೈಕ್ರೋ ಫೈನಾನ್ಸ್ ಸಂಸ್ಥೆಯ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಮೈಕ್ರೋ ಫೈನಾನ್ಸ್‌ನವರ ಹಾವಳಿ ತಪ್ಪಿಸಬೇಕೆಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಬುಧವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ.

ಜಿಲ್ಲೆಯಲ್ಲಿ ಎಷ್ಟು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿವೆ ಹಾಗೂ ಎಷ್ಟು ಮಂದಿಗೆ ಸಾಲ ನೀಡಲಾಗಿದೆ ಎಂಬ ನಿಖರವಾದ ಮಾಹಿತಿ ಇಲ್ಲ. ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಸಹಾಯವಾಣಿ ತೆರೆದಿಲ್ಲ.

Tags:
error: Content is protected !!