ಮಂಡ್ಯ: ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ (ವಿ.ಸಿ) ಬಿದ್ದದ್ದ ಕಾರಿನ ಚಾಲಕನ ಶವ ಇಂದು (ಶುಕ್ರವಾರ) ಪತ್ತೆಯಾಗಿದೆ.
ತೀವ್ರ ಹುಟುಕಾಟದ ನಂತರ ಘಟನಾ ಸ್ಥಳದ ಸಮೀಪದ ಸೇತುವೆ ಬಳಿ ಚಾಲಕ ಮೃತ ದೇಹ ಪತ್ತೆಯಾಗಿದೆ. ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಮಾಡಿದ ನಂತರ ಶವ ನೀರಿನಲ್ಲಿ ಕಂಡುಬಂದಿದೆ.
ಈ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತರಾಗಿದ್ದಾರೆ.
ಕೆಆಎಸ್‌ನಿಂದ ವಿಶ್ವೇಶ್ವರಯ್ಯ ನಾಲೆಗೆ ನೀರು ಬಿಟ್ಟಿರುವುದರಿಂದ ನಾಲೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿಯುತ್ತಿದೆ. ಅಲ್ಲದೆ, ನಾಲೆಯ ಆಳ 18 ಅಡಿ ಇರುವುದರಿಂದ ಕಾರು ನೀರಿನಲ್ಲಿ ಮುಳುಗಿತ್ತು. ಅಗ್ನಿಶಾಮಕ ದಳದವರು ಕಾರನ್ನು ನೀರಿನಿಂದ ಮೇಲೆತ್ತಿದ್ದಾರೆ.
ಶಿವಳ್ಳಿಯಲ್ಲಿ ಮೆಡಿಕಲ್ ಶಾಪ್ ಹೊಂದಿದ್ದ ಲೋಕೇಶ್ ಜತೆಗೆ ವ್ಯವಸಾಯ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಗುರುವಾರ ಕಾರಿನಲ್ಲಿ ಪಾಂಡವ ಪುರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ತಿಬ್ಬನಹಳ್ಳಿ ಮೂಲಕ ಹಾದು ಹೋಗುವಾಗ, ವಿಶ್ವೇಶ್ವರಯ್ಯ ನಾಲೆ ಬಳಿ ಕಾರು ನಿಯಂತ್ರಣ ತಪ್ಪಿ ನಾಲೆಯೊಳಗೆ ಬಿದ್ದಿದೆ.
ಈ ಘಟನೆ ನಡೆಯಲು ಕಾಲುವೆಗೆ ತಡೆಗೋಡೆ ಇಲ್ಲದಿರುವುದೇ ಕಾರಣ ಎನ್ನಲಾಗಿದೆ.
ಕಾರು ಬಿದ್ದಾಕ್ಷಣ ಗಾಬರಿಗೊಂಡ ಲೋಕೇಶ್ ಎಚ್ಚೆತ್ತುಕೊಂಡು ಹೊರಗೆ ಬರುವಷ್ಟರಲ್ಲಿಯೇ ಕಾರು ನೀರಿನಲ್ಲಿ ಮುಳುಗಿದೆ. ನೀರು ರಭಸವಾಗಿ ಹರಿಯುತ್ತಿದ್ದರಿಂದ ದಡ ಸೇರಲಾಗದೆ ಕೊಚ್ಚಿ ಕೊಂಡು ಹೋಗಿರಬಹುದು ಎನ್ನಲಾಗುತ್ತಿದ್ದು, ಲೋಕೇಶ್ ಗಾಘಗಿ ಸ್ಥಳೀಯ ಈಜುಗಾರರು, ಅಗ್ನಿಶಾಮಕ ಸಿಬ್ಬಂದಿಗಳಿಂದ ನಿನ್ನೆ ರಾತ್ರಿ 8:30ರ ವರೆಗೂ ಹುಡುಕಾಟ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಸುಮಾರು 7.45 ಕ್ಕೆ ನಾಲೆಯ ಸಮೀಪ ಲೋಕೇಶ್ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರೇನ್ ಮೂಲಕ ಕಾರನ್ನು ಹೊರಗೆ ತೆಗೆದಿದ್ದು, ಲೋಕೇಶ್ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಲುವೆಯ ನೀರನ್ನು ಕಡಿಮೆ ಮಾಡಲು ನೀರಾವರಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.
ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…