ಮಂಡ್ಯ: ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ಕಳ್ಳರು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕದ್ದಿದ್ದಾರೆ. ಬಳಿಕ ದೇವಸ್ಥಾನದ ಗೋಡೆ ಮೇಲೆ 786 ಸಂಖ್ಯೆ ಹಾಗೂ ಅನ್ಯಧರ್ಮದ ಚಿಹ್ನೆ ಬರೆದು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಮಳವಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.





