ಮಂಡ್ಯ

ಮಂಡ್ಯ| ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಮೂವರು ವಿದ್ಯಾರ್ಥಿನಿಯರು ನೀರುಪಾಲು: ಬಾಲಕಿ ಸಾವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಾದೇವಪುರ ಬೋರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಗೆ ಬಟ್ಟೆ ಒಗೆಯಲು ಮತ್ತು ಪಾತ್ರೆ ತೊಳೆಯಲು ಬಂದಿದ್ದ ಆರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಈ ವೇಳೆ ಮೂವರನ್ನು ಸ್ಥಳೀಯರು ಕಾಲುವೆಯಿಂದ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಮೈಸೂರಿನ ಉದಯಗಿರಿ ಶಾಲೆಯೊಂದರಲ್ಲಿ ಓದುತ್ತಿದ್ದ 15 ವಿದ್ಯಾರ್ಥಿಗಳು ಹಾಗೂ ಇತರೆ ನಾಲ್ವರು ಟಾಟಾ ಏಸ್‌ನಲ್ಲಿ ನಾಲೆಗೆ ಬಟ್ಟೆ ಹಾಗೂ ಪಾತ್ರೆ ತೊಳೆಯಲು ಬಂದಿದ್ದರು.

ಇದನ್ನು ಓದಿ: ಮೈಸೂರು: ವಾಕಿಂಗ್ ಮಾಡುವಾಗಲೇ ವ್ಯಕ್ತಿ ಸಾವು

ಪಾತ್ರೆಗಳನ್ನು ಮುಳುಗಿಸಿ ತೆಗೆಯುವಾಗ ಓರ್ವ ಹುಡುಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಆತನನ್ನು ರಕ್ಷಿಸಲು ಆರು ಮಂದಿ ನಾಲೆಗೆ ಇಳಿದಿದ್ದಾರೆ.

ಈ ವೇಳೆ ಅವರು ಕೂಡ  ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಸ್ಥಳದಲ್ಲಿದ್ದ ಸ್ಥಳೀಯರು ಮೂವರನ್ನು ರಕ್ಷಣೆ ಮಾಡಿದ್ದಾರೆ. ಅದರಲ್ಲಿ ಓರ್ವ ಬಾಲಕಿ ಸಾವನ್ನಪ್ಪಿದ್ದು, ಮತ್ತಿಬ್ಬರು ಬಾಲಕರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವಿದ್ಯಾರ್ಥಿಗಳಿಗಾಗಿ ಇಂದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸಂಬಂಧ ಅರಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

8 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

9 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

10 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

11 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

16 hours ago